ETV Bharat / state

ಚಿಕ್ಕಮಗಳೂರು: ಗಾಂಜಾ ಪ್ರಕರಣದ ವಿಚಾರಣಾಧೀನ ಕೈದಿ ಆಸ್ಪತ್ರೆಯಿಂದ ಪರಾರಿ!

ಗಾಂಜಾ ಪ್ರಕರಣದ ವಿಚಾರಣಾಧೀನ ಕೈದಿ ಧನ್​ರಾಜ್ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಿಂದ ಪರಾರಿಯಾಗಿದ್ದಾನೆ.

Prisoner escaped from chikmagalur district hospital
ಗಾಂಜಾ ಪ್ರಕರಣದ ವಿಚಾರಣಾಧೀನ ಕೈದಿ ಆಸ್ಪತ್ರೆಯಿಂದ ಪರಾರಿ
author img

By

Published : May 28, 2022, 7:26 AM IST

ಚಿಕ್ಕಮಗಳೂರು: ಗಾಂಜಾ ಪ್ರಕರಣದ ವಿಚಾರಣಾಧೀನ ಕೈದಿ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಿಂದ ಪರಾರಿಯಾಗಿದ್ದಾನೆ. ಜಿಲ್ಲೆಯ ಕಡೂರು ಮೂಲದ ಧನ್​ರಾಜ್​​(47) ಪೊಲೀಸರ ಕಣ್ತಪ್ಪಿಸಿ ಓಡಿ ಹೋಗಿರುವ ವಿಚಾರಣಾಧೀನ ಕೈದಿ. ಗಾಂಜಾ ಪ್ರಕರಣದಲ್ಲಿ ಬಂಧಿತನಾಗಿದ್ದ ಧನರಾಜ್‍ನನ್ನು ಪೊಲೀಸರು ನ್ಯಾಯಾಲಯದ ವಶಕ್ಕೆ ನೀಡಿದ್ದರು.

ಜೈಲಿನಲ್ಲಿ ಆರಾಮಾಗಿದ್ದ ಧನ್​ರಾಜ್​ಗೆ ಕಳೆದ ಎರಡು ದಿನಗಳಿಂದ ಇದ್ದಕ್ಕಿದ್ದಂತೆ ಆರೋಗ್ಯದಲ್ಲಿ ಏರು ಪೇರಾಗಿತ್ತು. ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಆತನನ್ನು ಜೈಲಿನಿಂದ ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಿದ್ದರು. ಆರೋಪಿ ಕಾವಲಿಗೆ ಓರ್ವ ಜೈಲು ಸಿಬ್ಬಂದಿ ಹಾಗೂ ಮತ್ತೋರ್ವ ಗೃಹರಕ್ಷಕ ದಳದ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಓರ್ವ ಸಿಬ್ಬಂದಿ ಊಟಕ್ಕೆ ಹೋದ ಸಂದರ್ಭದಲ್ಲಿ ಮತ್ತೋರ್ವ ಸಿಬ್ಬಂದಿಯನ್ನು ತಳ್ಳಿ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದಾನೆ.

ಇದನ್ನೂ ಓದಿ: ತುಮಕೂರಿನಲ್ಲಿ ಹೆಜ್ಜೇನು ದಾಳಿ: ಓರ್ವ ಸಾವು, ಮೂವರ ಸ್ಥಿತಿ ಗಂಭೀರ

ಶೌಚಾಲಯಕ್ಕೆ ಹೋಗಬೇಕೆಂದು ತಿಳಿಸಿದ ಹಿನ್ನೆಲೆ, ಪೊಲೀಸ್ ಕಾನ್ಸ್​ಟೇಬಲ್ ಆತನ ಕೈಕೋಳವನ್ನು ತೆಗೆದು ಶೌಚಾಲಯದ ಕೊಠಡಿಗೆ ಕಳುಹಿಸಿದ್ದರು. ಆಗ ಪೊಲೀಸ್ ಕಾನ್ಸ್​ಟೇಬಲ್​ನನ್ನು ಶೌಚಾಲಯದ ಕೊಠಡಿಗೆ ತಳ್ಳಿ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾಗಿರೋ ಧನ್​ರಾಜ್ ಪತ್ತೆಗೆ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.