ETV Bharat / state

ಟಿಪ್ಪು ಜಯಂತಿ ರದ್ದತಿಗೆ ವಿರೋಧ: ಕಡೂರು-ಬೀರೂರು ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ

ಸಿದ್ದರಾಮಯ್ಯ ಸರ್ಕಾರವಿದ್ದಾಗ ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆಯನ್ನು ಜಾರಿಗೆ ತರಲಾಗಿತ್ತು. ಆದರೆ ಬಿಎಸ್​ವೈ ಮುಖ್ಯಮಂತ್ರಿಯಾದ ಕೂಡಲೇ ಟಿಪ್ಪು ಜಯಂತಿ ರದ್ದು ಮಾಡಿರೋದು ಸರಿಯಲ್ಲ ಎಂದು ಕಡೂರು - ಬೀರೂರು ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

ಬೀರೂರು ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
author img

By

Published : Aug 3, 2019, 5:39 PM IST

ಚಿಕ್ಕಮಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಟಿಪ್ಪು ಜಯಂತಿಯನ್ನು ರದ್ದುಗೊಳಿಸಿರುವುದನ್ನು ವಿರೋಧಿಸಿ, ಕಡೂರು - ಬೀರೂರು ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಕಡೂರು ತಾಲೂಕಿನ ಮುಸ್ಲಿಂ ಸಮುದಾಯದವರು ಭಾಗವಹಿಸಿ ನಗರದ ಪ್ರವಾಸಿ ಮಂದಿರದಿಂದ ತಾಲೂಕು ಕಚೇರಿಯವರೆಗೂ ಪ್ರತಿಭಟನೆ ನಡೆಸಿದರು.

ಬೀರೂರು ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಕಾಂಗ್ರೆಸ್​ ಮುಖಂಡ ಆನಂದ್ ಮಾತನಾಡಿ, ಟಿಪ್ಪು ಒಬ್ಬ ಮಹಾನ್ ದೇಶ ಭಕ್ತ. ದೇಶಕ್ಕಾಗಿ ತನ್ನ ಇಬ್ಬರು ಮಕ್ಕಳನ್ನು ಒತ್ತೆಯಿಟ್ಟು ಬ್ರಿಟೀಷರ ವಿರುದ್ಧ ಹೋರಾಡಿದ ಕರ್ನಾಟಕದ ಹೆಮ್ಮೆಯ ಪುತ್ರ. ಇಂತಹ ವ್ಯಕ್ತಿಯ ಜಯಂತಿಯನ್ನು ಸಿದ್ದರಾಮಯ್ಯ ಸರ್ಕಾರ ಇದ್ದಾಗ ರಾಜ್ಯದಲ್ಲಿ ಜಾರಿಗೆ ತಂದಿದ್ದರು. ಆದರೆ ಬಿ ಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿಯಾದ ಕೂಡಲೇ ಟಿಪ್ಪು ಜಯಂತಿ ರದ್ದು ಮಾಡಿರೋದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ಮೂಲಕ ಕಡೂರು ತಹಶೀಲ್ದಾರ್ ಉಮೇಶ್ ಅವರಿಗೆ ಮನವಿ ಪತ್ರವನ್ನು ಸಲ್ಲಿಸಲಾಯ್ತು.

Intro:Kn_Ckm_06_Congress protest_av_7202347Body:ಚಿಕ್ಕಮಗಳೂರು :-

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಟಿಪ್ಪು ಜಯಂತಿಯನ್ನು ರದ್ದು ಗೊಳಿಸುವುದನ್ನು ವಿರೋಧಿಸಿ ಚಿಕ್ಕಮಗಳೂರು ಜಿಲ್ಲೆಯ ಕಡೂರು - ಬೀರೂರು ಬ್ಲಾಕ್ ಕಾಂಗ್ರೇಸ್ ವತಿಯಿಂದಾ ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತ ಪಡಿಸಿ ನೂರಾರು ಕಾಂಗ್ರೇಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿದರು. ಈ ಪ್ರತಿಭಟನೆಯಲ್ಲಿ ಕಡೂರು ತಾಲೂಕಿನ ಮುಸ್ಲಿಂ ಸಮುದಾಯದವರು ಭಾಗವಹಿಸಿದ್ದು ನಗರದ ಪ್ರವಾಸಿ ಮಂದಿರದಿಂದಾ ತಾಲೂಕ್ ಕಚೇರಿಯ ವರೆಗೂ ಪ್ರತಿಭಟನೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೇಸ್ ಮುಖಂಡ ಆನಂದ್ ಅವರು ಟಿಪ್ಪು ಒಬ್ಬ ಮಹಾನ್ ದೇಶ ಭಕ್ತನಾಗಿದ್ದು ದೇಶಕ್ಕಾಗಿ ತನ್ನ ಇಬ್ಬರೂ ಮಕ್ಕಳನ್ನು ಒತ್ತೆಯಿಟ್ಟು ಬ್ರಿಟಿಷರಿಗೆ ವಿರುದ್ದ ಹೋರಾಡಿದ ಕರ್ನಾಟಕದ ಹೆಮ್ಮೆಯ ಪುತ್ರನಾಗಿದ್ದು ಇಂತಹ ವ್ಯಕ್ತಿಯ ಜಯಂತಿಯನ್ನು ಸಿದ್ದರಾಮಯ್ಯ ಸರ್ಕಾರ ಇದ್ದಾಗ ರಾಜ್ಯದಲ್ಲಿ ಜಾರಿಗೆ ತಂದಿದ್ದರು.ಆದರೇ ಮುಖ್ಯಮಂತ್ರಿಯಾಗಿ ಬಿ,ಎಸ್ ಯಡ್ಡಿಯೂರಪ್ಪ ನವರು ಮುಖ್ಯಮಂತ್ರಿಯಾದ ಕೂಡಲೇ ಟಿಪ್ಪು ಜಯಂತಿ ರದ್ದು ಮಾಡಿರೋದು ಸರಿಯಲ್ಲ ಎಂದೂ ಬಿಜೆಪಿ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ನಂತರ ಕಡೂರಿನ ತಹಶೀಲ್ಡಾರ್ ಉಮೇಶ್ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದರು.ಈ ಪ್ರತಿಭಟನೆಯಲ್ಲಿ ನೂರಾರು ಕಾಂಗ್ರೇಸ್ ಕಾರ್ಯಕರ್ತರು ಹಾಗೂ ಮುಸ್ಲಿಂ ಸಮುಧಾಯವರು ಭಾಗವಹಿಸಿದ್ದರು...

Conclusion:ರಾಜಕುಮಾರ್.....
ಈ ಟಿವಿ ಭಾರತ್....
ಚಿಕ್ಕಮಗಳೂರು.....
ETV Bharat Logo

Copyright © 2024 Ushodaya Enterprises Pvt. Ltd., All Rights Reserved.