ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ಗಾಂಧಿ ವೃತ್ತದಲ್ಲಿ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ, ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
ಪೌರತ್ವ ತಿದ್ದುಪಡಿ ಮಸೂದೆಯನ್ನು ನಮ್ಮ ಸಂವಿಧಾನ ಮೂಲ ಆಶಯಗಳಿಗೆ ವಿರುದ್ಧವಾಗಿದ್ದು, ಧರ್ಮದ ಆಧಾರದಲ್ಲಿ ದೇಶದ ಜನತೆಯನ್ನು ವಿಭಜಿಸುವ ದುರುದ್ದೇಶವನ್ನು ಈ ಕಾಯ್ಡೆ ಹೊಂದಿದೆ ಎಂದು ಪ್ರತಿಭಟನಾಕಾರರು ಆರೋಪ ಮಾಡಿದರು. ರಾಷ್ಟ್ರೀಯ ಐಕ್ಯತೆ, ಸಮಗ್ರತೆ ಹಾಗೂ ಬ್ರಾತೃತ್ವಕ್ಕೆ ಧಕ್ಕೆ ಉಂಟು ಮಾಡುವಂತಹ ಈ ಮಸೂದೆಯನ್ನು ರದ್ದು ಪಡಿಸುವ ಮೂಲಕ ಭಾರತ ಜಾತ್ಯಾತೀತ ಮತ್ತು ಧರ್ಮ ನಿರಪೇಕ್ಷಕ ತತ್ವಗಳನ್ನು ಎತ್ತಿ ಹಿಡಿಯಲು ಮುಂದಾಗಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.
ಈ ಪ್ರತಿಭಟನೆಯಲ್ಲಿ ತರೀಕೆರೆಯ ಕಾಂಗ್ರೆಸ್ ಮಾಜಿ ಶಾಸಕ ಜಿ.ಹೆಚ್ ಶ್ರೀನಿವಾಸ್ ಸೇರಿದಂತೆ ಹಲವರು ಮುಖಂಡರು ಭಾಗವಹಿಸಿದ್ದು, ಕೂಡಲೇ ಕೇಂದ್ರ ಸರ್ಕಾರ ಈ ಮಸೂದೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.