ಚಿಕ್ಕಮಗಳೂರು: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೋರ್ವರ ಮೇಲೆ ಪಿಎಸ್ಐ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿರುವ ಜಿಲ್ಲೆಯ ಕಡೂರು ತಾಲೂಕಿನ ಸಖರಾಯ ಪಟ್ಟಣದ ಗ್ರಾಮಸ್ಥರು ಸೂಕ್ತ ಕ್ರಮಕ್ಕಾಗಿ ಠಾಣೆಯ ಎದುರು ಪ್ರತಿಭಟಿಸಿದ್ದಾರೆ.
ಕಡೂರು ತಾಲೂಕಿನ ಸಖರಾಯಪಟ್ಟಣದ ದಿನೇಶ್ ಎಂಬುವರ ಮೇಲೆ ಪಿಎಸ್ಐ ಹರೀಶ್ ನಾಯ್ಕ್ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಓದಿ: ಅಟಲ್ ನಗರ ನಾಮಕರಣ : ಕಾಂಗ್ರೆಸ್ ಆರೋಪ ಸರಿಯಲ್ಲ ಎಂದ ಸಚಿವ ಜೋಶಿ
ಈ ಹಿನ್ನೆಲೆಯಲ್ಲಿ ಸಖರಾಯಪಟ್ಟಣ ಗ್ರಾಮ ಬಂದ್ ಮಾಡಿರುವ ಸ್ಥಳೀಯರು ಪೊಲೀಸ್ ಠಾಣೆ ಎದುರು ಜಮಾಯಿಸಿ ಪಿಎಸ್ಐ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.