ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಸುರಿದ ಧಾರಾಕಾರ ಅಕಾಲಿಕ ಮಳೆಗೆ, ಕಾಫಿ ಬೆಳೆಗಾರರು ಅತಂತ್ರರಾಗಿದ್ದಾರೆ.
ನಿನ್ನೆ ಸಂಜೆ ಸುರಿದ ಧಾರಾಕಾರ ಮಳೆಯಿಂದ ಕಣದಲ್ಲಿದ್ದ ಕಾಫಿ ಬೀಜಗಳು ಮಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಕೊಚ್ಚಿ ಹೋಗಿರೋ ಕಾಫಿಯನ್ನ ಬೆಳೆಗಾರರು ರಸ್ತೆ ಹಾಗೂ ಚರಂಡಿಯಲ್ಲಿ ಕುಳಿತು ಬಾಚುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಅಕಾಲಿಕ ಮಳೆಯಿಂದ ಕೊಚ್ಚಿ ಹೋಗಿದ್ದ ಕಾಫಿಯನ್ನು, ರೈತರು ಹಾಗೂ ಜನರು ಆರಿಸಿಕೊಳ್ಳುತ್ತಿದ್ದು, ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸುತ್ತಮುತ್ತ ಮಳೆ ಅವಾಂತರದಿಂದ ಈ ಘಟನೆ ಸೃಷ್ಟಿಯಾಗಿದೆ.