ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಬಾಳೂರು ಹೊರಟ್ಟಿ ಗ್ರಾಮದಲ್ಲಿ ಗುಡ್ಡ ಕುಸಿದು ಮೃತಪಟ್ಟ ತಾಯಿ ಮತ್ತು ಮಗನ ಅಂತ್ಯಸಂಸ್ಕಾರ ನಡೆಸಲು ಸಾಧ್ಯವಾಗದೆ ಕುಟುಂಬಸ್ಥರು ಸಂಕಷ್ಟ ಅನುಭವಿಸುತ್ತಿದ್ದಾರೆ.
ನಿನ್ನೆ ಸಂಜೆಯೇ ಮೃತದೇಹ ಸಿಕ್ಕಿದ್ದು, ಮೂಡಿಗೆರೆ ತಾಲೂಕು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಆದರೆ ಮೃತ ಶೇಷಮ್ಮ ಮತ್ತು ಸತೀಶ್ ಅವರ ಮೃತ ದೇಹವನ್ನು ಊರಿಗೆ ಕೊಂಡೊಯ್ಯಲು ಸಾಧ್ಯವಾಗುತ್ತಿಲ್ಲ. ಊರಿಗೆ ಹೋಗಲು ರಸ್ತೆಯೇ ಇಲ್ಲದಂತಾಗಿದ್ದು, ಗುಡ್ಡ ಕುಸಿತದ ಪರಿಣಾಮ ಊರಿನ ರಸ್ತೆ ಸಂಪೂರ್ಣ ಮುಚ್ಚಿ ಹೋಗಿದೆ.
ಮೃತದೇಹಗಳನ್ನು ಆಸ್ವತ್ರೆಯಲ್ಲಿ ಇಟ್ಟುಕೊಂಡು ಸಂಬಂಧಿಕರು ಕಾಯುತ್ತಿದ್ದಾರೆ. ಕೂಡಲೇ ಶವ ಕೊಂಡೊಯ್ದು ಅಂತ್ಯಸಂಸ್ಕಾರ ನೆರವೇರಿಸಲು ವ್ಯವಸ್ಥೆ ಕಲ್ಪಿಸಿ ಎಂದು ಕುಟುಂಬಸ್ಥರು ಅಧಿಕಾರಿಗಳ ಬಳಿ ಅಂಗಲಾಚುತ್ತಿದ್ದಾರೆ.
ಇತ್ತ ಮೂಡಿಗೆರೆ ತಾಲೂಕಿನಲ್ಲಿ ಹೇಮಾವತಿ ನದಿಯಲ್ಲಿ ಕೊಚ್ಚಿ ಹೋಗಿದ್ದ ಶ್ರೀವತ್ಸ ಎಂಬ ಯುವಕನ ಮೃತ ದೇಹ 4 ದಿನಗಳ ಬಳಿಕ ಪತ್ತೆಯಾಗಿದೆ. ಮೂಡಿಗೆರೆ ತಾಲೂಕಿನ ಆಲೂರಿನಲ್ಲಿ ಈ ಯುವಕ ಕೊಚ್ಚಿ ಹೋಗಿದ್ದ.