ಚಿಕ್ಕಮಗಳೂರು: ತೌಕ್ತೆ ಚಂಡಮಾರುತದ ಪರಿಣಾಮ ಚಿಕ್ಕಮಗಳೂರಿನಲ್ಲಿ ಇಂದು ಕೂಡ ಮಳೆ ಮುಂದುವರೆದಿದೆ.
ಜಿಲ್ಲೆಯ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಾಳುರು, ನೀಡುವಾಳೆ, ಗಬಗಲ್, ಕೆಳಗೂರು, ಜಾವಳಿ, ಸುಂಕಸಾಲೆ, ಬಾರತಿ ಬೈಲ್, ಸಬ್ಬೆನಹಳ್ಳಿ, ಹೊರಟ್ಟಿ, ಕೊಪ್ಪ, ಎನ್.ಆರ್ ಪುರ, ಶೃಂಗೇರಿ, ಜಯಪುರ, ಸೇರಿದಂತೆ ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಬೆಳ್ಳಂಬೆಳಗ್ಗೆ ಜಿಟಿಜಿಟಿ ಮಳೆ ಹಿನ್ನೆಲೆ ರಸ್ತೆಗಿಳಿಯಲು ಜನರು ಹಿಂದೆಟು ಹಾಕುತ್ತಿದ್ದಾರೆ. ಜಿಲ್ಲಾದ್ಯಂತ ಮಂಜು ಮುಸುಕಿದ ವಾತಾವರಣವಿದ್ದು, ಚಳಿಯ ವಾತಾವರಣ ನಿರ್ಮಾಣವಾಗಿದೆ.
ಬಣಕಲ್ ನಗರದಲ್ಲಿ ನಡೆಯುತ್ತಿರುವ ರಸ್ತೆ ಅಗಲೀಕರಣಕ್ಕೆ ಅಸ್ಲಮ್ ಎಂಬುವರ ಮನೆಯ ಗೋಡೆಗಳು ಬಿರುಕು ಬಿಟ್ಟು ಆತಂಕದಲ್ಲಿ ಇರುವಂತಾಗಿದೆ. ಬಿದರಹಳ್ಳಿ ಸಮೀಪ ಚಂಡಮಾರುತಕ್ಕೆ ಹತ್ತಾರು ವಿದ್ಯುತ್ ಕಂಬಗಳು ರಸ್ತೆಗೆ ಉರುಳಿ ಬಿದ್ದಿವೆ.
ಜಿಲ್ಲೆಯಲ್ಲಿ ಎರಡು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮಲೆನಾಡು ಭಾಗದ ಜನರು ಎಚ್ಚರದಿಂದ ಇರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.