ಚಿಕ್ಕಮಗಳೂರು: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ಸಾಕಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಜರುಗಿಸಿದರೂ ಯಾವುದೇ ಪ್ರಯೋಜನಗಳು ಆಗುತ್ತಿಲ್ಲ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಡಿ ಸಿ ಆದೇಶ ಧಿಕ್ಕರಿಸಿ ಜಾತ್ರಾ ಮಹೋತ್ಸವ ನಡೆಸಲಾಗಿದೆ. ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದ ಶ್ರೀ ಶಕುನ ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವ ಜರುಗಿದೆ. ರಥೋತ್ಸವದಲ್ಲಿ ಸಾವಿರಾರು ಭಕ್ತರು ಭಾಗಿಯಾಗಿದ್ದಾರೆ.
ಜಾತ್ರೆ ನಡೆಸದಂತೆ ಚಿಕ್ಕಮಗಳೂರು ಡಿ ಸಿ ಕೆ ಎನ್ ರಮೇಶ್ ಆದೇಶ ಹೊರಡಿಸಿದ್ದರು. ಕೊರೊನಾ ಹೆಚ್ಚಾಗುತ್ತಿರುವುದರಿಂದ ಜಾತ್ರಾ ಮಹೋತ್ಸವವನ್ನು ಜಿಲ್ಲೆಯಾದ್ಯಂತ ರದ್ದು ಮಾಡಿದ್ದರು. ಆದರೆ ಡಿಸಿ ಆದೇಶವನ್ನ ನಿರ್ಲಕ್ಷಿಸಿ ರಥೋತ್ಸವವನ್ನು ನಡೆಸಲಾಗಿದೆ.