ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಇಂದು ಇಬ್ಬರು ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಒಟ್ಟು ಸಾವಿಗೀಡದವರ ಸಂಖ್ಯೆ 673 ಕ್ಕೆ ಏರಿಕೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 96 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಈವರೆಗೆ 30,010 ಮಂದಿಗೆ ಕೊರೊನಾ ದೃಢಪಟ್ಟಿದೆ. ಇಂದು 424 ಮಂದಿ ಗುಣಮುಖರಾಗಿದ್ದು, ಈವರೆಗೆ 27443 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 1894 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 255507 ಮಂದಿಯ ತಪಾಸಣೆ ನಡೆಸಲಾಗಿದ್ದು, ಇದರಲ್ಲಿ 225497 ನೆಗೆಟಿವ್ ಬಂದಿದೆ. ಈವರೆಗೆ 10,166 ಮಾಸ್ಕ್ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು ರೂ 11,35,485 ದಂಡ ವಸೂಲಿ ಮಾಡಲಾಗಿದೆ.
ಚಿಕ್ಕಮಗಳೂರು: ಜಿಲ್ಲೆಯಲ್ಲಿಂದು 38 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ, 12.256 ಕ್ಕೆ ಏರಿಕೆಯಾಗಿದೆ.
ಈ ದಿನ ಜಿಲ್ಲಾ ಕೋವಿಡ್ -19 ಆಸ್ಪತ್ರೆಯಿಂದ 66 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೂ ಜಿಲ್ಲೆಯಲ್ಲಿ ಒಟ್ಟು 11.555 ಜನ ಸೋಂಕಿತರು, ಜಿಲ್ಲಾ ಕೋವೀಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆಯಾದಂತೆ ಆಗಿದೆ. ಚಿಕ್ಕಮಗಳೂರು ತಾಲೂಕಿನಲ್ಲಿ 25, ಕಡೂರು ತಾಲೂಕಿನಲ್ಲಿ 01, ಮೂಡಿಗೆರೆ ತಾಲೂಕಿನಲ್ಲಿ 02, ತರೀಕೆರೆ ತಾಲ್ಲೂಕಿನಲ್ಲಿ 08, ಶೃಂಗೇರಿ ತಾಲ್ಲೂಕಿನಲ್ಲಿ 01, ಕೊಪ್ಪ ತಾಲೂಕಿನಲ್ಲಿ 01, ಸೋಂಕಿತ ಪ್ರಕರಣಗಳು ಪತ್ತೆಯಾಗಿದೆ. ಈವರೆಗೂ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 136 ಕ್ಕೆ ಏರಿಕೆಯಾಗಿದೆ. ಈ ದಿನ ಪತ್ತೆಯಾದ ಸೋಂಕಿತರು ವಾಸ ಮಾಡುತ್ತಿದ್ದ, ಮನೆಯನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಂಪೂರ್ಣ ಸೀಲ್ಡೌನ್ ಮಾಡಿ ಕಟ್ಟೆಚ್ಚರ ವಹಿಸಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 12,256 ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು 499 ಸಕ್ರಿಯ ಪ್ರಕರಣಗಳಿವೆ.