ETV Bharat / state

ಚಳ್ಳಕೆರೆಯಲ್ಲಿ ಮಧ್ಯಾಹ್ನದ ಬಳಿಕ ವ್ಯಾಪಾರ-ವಹಿವಾಟು ಬಂದ್ - challakere news

ಚಳ್ಳಕೆರೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಮಧ್ಯಾಹ್ನ 2ರಿಂದ ವ್ಯಾಪಾರ ವಹಿವಾಟಿಗೆ ನಿರ್ಬಂಧ ಹೇರಲಾಗಿದೆ.

challakere
ಚಳ್ಳಕೆರೆ
author img

By

Published : Jul 10, 2020, 11:23 PM IST

ಚಿತ್ರದುರ್ಗ: ಚಳ್ಳಕೆರೆ ಪಟ್ಟಣದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಹಾಗಾಗಿ ವ್ಯಾಪಾರ- ವಹಿವಾಟುಗಳನ್ನು ಮಧ್ಯಾಹ್ನದ ಬಳಿಕ ಬಂದ್ ಮಾಡುವಂತೆ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.

challakere
ತಹಶೀಲ್ದಾರ್ ಆದೇಶದ ಪ್ರತಿ

ಚಳ್ಳಕೆರೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಮಧ್ಯಾಹ್ನ 2ರಿಂದ ವ್ಯಾಪಾರ ವಹಿವಾಟಿಗೆ ನಿರ್ಬಂಧ ಹೇರಲಾಗಿದೆ. ಕಳೆದ ಒಂದು ವಾರದಲ್ಲಿ 9 ಜನರಲ್ಲಿ ಸೋಂಕು ಪತ್ತೆಯಾಗಿದೆ. ನಗರದಲ್ಲಿ ತುರ್ತು ಸೇವೆ ಹೊರತುಪಡಿಸಿ ಇತರೆ ವ್ಯಾಪಾರ ವಹಿವಾಟಿಗೆ ಅವಕಾಶ ನಿರ್ಬಂಧಿಸಿ ಚಳ್ಳಕೆರೆ ತಹಸೀಲ್ದಾರ್ ಎಂ. ಮಲ್ಲಿಕಾರ್ಜುನ ಆದೇಶ ಹೊರಡಿಸಿದ್ದಾರೆ.

ಜುಲೈ 10 ರಿಂದ ಜುಲೈ 24ರವರೆಗೆ ನಿರ್ಬಂಧ ವಿಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನದಿಂದಲೇ ಚಳ್ಳಕೆರೆಯಲ್ಲಿ ಬಹುತೇಕ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.