ಚಿಕ್ಕಮಗಳೂರು: ಧರ್ಮಸ್ಥಳಕ್ಕೆ ಪಾದಯಾತ್ರೆ ಕೈಗೊಂಡಿದ್ದ ಯಾತ್ರಿಕರಿಗೆ ಟಿಟಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಹತ್ತಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ನಲ್ಲಿ ನಡೆದಿದೆ.
ಶಿವರಾತ್ರಿ ನಿಮಿತ್ತ ಶೀಕ್ಷೇತ್ರ ಧರ್ಮಸ್ಥಳಕ್ಕೆ ಚಾರ್ಮಾಡಿ ಘಾಟ್ನ ಎರಡನೇ ತಿರುವಿನಲ್ಲಿ ಯಾತ್ರಿಕರು ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ, ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಅವರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ 10ಕ್ಕೂ ಅಧಿಕ ಮಂದಿಗೆ ಸಣ್ಣ - ಪುಟ್ಟ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಓದಿ: ನಾಪತ್ತೆಯಾಗಿದ್ದ ಮಾಜಿ ಶಾಸಕರ ಮೊಮ್ಮಕ್ಕಳು ಶವವಾಗಿ ಪತ್ತೆ!
ಘಟನಾ ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.