ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ರಸ್ತೆಯಿಂದ ಬೇರೆಡೆಗೆ ಚಲಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ, ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿಯ ಸುಂಕಸಾಲೆ ಬಳಿ ಈ ಅವಘಡ ಸಂಭವಿಸಿದೆ.
ಹೊರನಾಡು ಕಡೆಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್, ಚಾಲಕನ ನಿಯಂತ್ರಣ ತಪ್ಪಿ ಬಸ್ನ ಒಂದು ಚಕ್ರ ಸೇತುವೆಯ ಕೆಳಗಿಳಿದಿದೆ. ಬಸ್ನಲ್ಲಿ 30 ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.