ಚಿಕ್ಕಮಗಳೂರು : ಬೈಕ್ಗೆ ಮಹೀಂದ್ರಾ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದೇವರಹಳ್ಳಿ ಗೇಟ್ ಬಳಿ ನಡೆದಿದೆ. ಮೃತಪಟ್ಟವರನ್ನು ತಿಪಟೂರಿನ ರಾಮು (28) ಹಾಗೂ ನವೀನ್ (25) ಎಂದು ಗುರುತಿಸಲಾಗಿದೆ.
ಈ ಇಬ್ಬರು ಕೆಲಸದ ನಿಮಿತ್ತ ಬೈಕ್‌ನಲ್ಲಿ ಚಿಕ್ಕಮಗಳೂರು ನಗರಕ್ಕೆ ಆಗಮಿಸಿ ಹಿಂತಿರುಗುವಾಗ ದೇವರಹಳ್ಳಿ ಗೇಟ್ ಬಳಿ, ಕಡೂರಿನಿಂದ ಮೂಡಿಗೆರೆ ಭಾಗಕ್ಕೆ ಸಾಗುತ್ತಿದ್ದ ಮಹೀಂದ್ರಾ ಪಿಕಪ್ ವಾಹನಕ್ಕೆ ಡಿಕ್ಕಿಯಾಗಿದೆ.
ಈ ವೇಳೆ ರಾಮು, ನವೀನ್ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ವ್ಯಕ್ತಿ ಅಭಿಷೇಕ್ ತೀವ್ರಗಾಯಗೊಂಡ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ರವಾನೆ ಮಾಡಲಾಗಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಲ್ಲದೇ ಪರಿಶೀಲನೆ ನಡೆಸಿ ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ : ಪೂಜಾರಿಯ ಬೆತ್ತದೇಟಿಗೆ ಮಹಿಳೆ ಮೃತಪಟ್ಟ ಆರೋಪ : ಕಾರಣ ಕೇಳಿದ್ರೆ ಶಾಕ್ ಆಗ್ತೀರಾ!