ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಕನ್ನಳ್ಳಿಯಲ್ಲಿ ಶ್ರೀಗಂಧ ಮರ ಕಡಿಯುತ್ತಿದ್ದ ಆರೋಪಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿ 15 ಕೆಜಿ ತೂಕದ ಗಂಧದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.
ದಾಳಿ ವೇಳೆ ಶ್ರೀಗಂಧದ ಮರಗಳನ್ನು ಕಡಿಯುತ್ತಿದ್ದ ಮೂವರು ಆರೋಪಿಗಳಲ್ಲಿ ಸ್ವಾಮಿ ಎಂಬಾತನನ್ನ ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ. ಈ ವೇಳೆ, ಮತ್ತಿಬ್ಬರು ಆರೋಪಿಗಳಾದ ಉಮೇಶ್, ಸ್ವಾಮಿ ಎಂಬುವರು ಪರಾರಿಯಾಗಿದ್ದಾರೆ.
ಆರ್ಎಫ್ಒ ಮೋಹನ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಮೂಡಿಗೆರೆ ಅರಣ್ಯ ಠಾಣಾ ವ್ಯಾಪ್ತಿಯಲ್ಲಿ ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.