ಚಿಕ್ಕಮಗಳೂರು: ದಿನದಿಂದ ದಿನಕ್ಕೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಜನರಲ್ಲಿ ಆತಂಕ ಮೂಡಿದೆ. ಈ ಚೈನ್ ಲಿಂಕ್ ಮುರಿಯಲೇಬೇಕೆಂದು ಜಿಲ್ಲಾಡಳಿತ ಈಗಾಗಲೇ 4 ದಿನಗಳ ಕಾಲ ಸಂಪೂರ್ಣ ಲಾಕ್ಡೌನ್ ಮಾಡಿದ್ದು, ನಗರದಲ್ಲಿ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ಕೊರೊನಾ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ನಗರಸಭೆ ಅಧಿಕಾರಿಗಳು ಹಾಗೂ ಅಗ್ನಿಶಾಮಕ ದಳದವರು ಒಂದು ಮಹತ್ವದ ಕಾರ್ಯಕ್ಕೆ ಇಂದಿನಿಂದ ಚಾಲನೆ ನೀಡಿದ್ದು, ನಗರದ ಎಂ.ಜಿ. ರಸ್ತೆ, ನಗರದ ಪ್ರಮುಖ ಬೀದಿಗಳಲ್ಲಿ ಸಂಪೂರ್ಣ ಸ್ಯಾನಿಟೈಸ್ ಮಾಡಿದ್ದಾರೆ. ಇನ್ನು ಮೂರು ದಿನಗಳ ಕಾಲ ಈ ಕಾರ್ಯ ಮುಂದುವರೆಯಲಿದ್ದು, ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಕೆಲಸ ನಡೆಯಲಿದೆ. ಪ್ರತಿನಿತ್ಯ ಏಳು ನೂರಕ್ಕೂ ಹೆಚ್ಚು ಕೇಸುಗಳು ಜಿಲ್ಲೆಯಲ್ಲಿ ದಾಖಲಾಗುತ್ತಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.