ETV Bharat / state

ಕಾಶ್ಮೀರದ ಗಡಿ ಭಾಗದಲ್ಲಿ ಶಾರದಾದೇವಿ ದೇಗುಲ ನಿರ್ಮಾಣ ಕಾರ್ಯ: ಇಂದು ಶೃಂಗೇರಿಯಲ್ಲಿ ಪಂಚಲೋಹ ವಿಗ್ರಹ ಹಸ್ತಾಂತರ

ಜಯದಶಮಿಯ ಶುಭ ದಿನವಾದ ಬುಧವಾರ ಪಂಚ ಲೋಹದಿಂದ ನಿರ್ಮಾಣ ಮಾಡಲಾಗಿರುವ ದೇವಿಯ ವಿಗ್ರಹವನ್ನು ಶೃಂಗೇರಿಯಲ್ಲಿ ಕಾಶ್ಮೀರದ ಸೇವ್ ಶಾರದಾ ಸಮಿತಿಯವರು ಪಡೆಯಲಿದ್ದಾರೆ.

sharada-devi-temple-at-of-kashmir-border-handover-of-panchaloha-idol-in-sringeri-tomorrow
ಕಾಶ್ಮೀರದ ಗಡಿ ಭಾಗದಲ್ಲಿ ಶಾರದಾದೇವಿ ದೇಗುಲ ನಿರ್ಮಾಣ ಕಾರ್ಯ: ನಾಳೆ ಶೃಂಗೇರಿಯಲ್ಲಿ ಪಂಚಲೋಹ ವಿಗ್ರಹ ಹಸ್ತಾಂತರ
author img

By

Published : Oct 4, 2022, 10:59 PM IST

Updated : Oct 5, 2022, 7:17 AM IST

ಚಿಕ್ಕಮಗಳೂರು: ಕಾಶ್ಮೀರದ ಗಡಿ ಭಾಗದ ತಿತ್ವಾಲ್​ನಲ್ಲಿ ಶಾರದಾದೇವಿ ದೇಗುಲ ನಿರ್ಮಾಣ ಕಾರ್ಯ ಭರದಿಂದ ನಡೆಯುತ್ತಿದ್ದು, ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಶಾರದೆ ಸನ್ನಿಧಿಯಿಂದ ವಿಜಯದಶಮಿಯ ದಿನ ಪಂಚಲೋಹ ಮೂರ್ತಿ ಹಸ್ತಾಂತರ ಕಾರ್ಯವು ನಡೆಯಲಿದೆ. ಕಾಶ್ಮೀರದ ಸೇವ್ ಶಾರದಾ ಸಮಿತಿಯವರು ಶೃಂಗೇರಿಗೆ ಬಂದು ಪಂಚಲೋಹ ವಿಗ್ರಹ ಪಡೆಯಲಿದ್ದು, ಅದರ ಸಿದ್ಧತೆಗಳು ಶೃಂಗೇರಿ ಮಠದಲ್ಲಿ ನಡೆಯುತ್ತಿದೆ.

ವಿಜಯದಶಮಿಯ ಶುಭ ದಿನವಾದ ಇಂದು ಪಂಚ ಲೋಹದಿಂದ ನಿರ್ಮಾಣ ಮಾಡಲಾಗಿರುವ ದೇವಿಯ ವಿಗ್ರಹವನ್ನು ಶೃಂಗೇರಿಯಲ್ಲಿ ವಿಶೇಷವಾಗಿ ಪೂಜಿಸಿ ಹಸ್ತಾಂತರ ಮಾಡಲಾಗುತ್ತದೆ. ಉಭಯ ಜಗದ್ಗುರುಗಳ ಸಾನಿಧ್ಯದಲ್ಲಿ ಕೆತ್ತನೆ ಮಾಡಿರುವ ದೇವಿಯ ವಿಗ್ರಹದ ಹಸ್ತಾಂತರ ಕಾರ್ಯವು ಅತ್ಯಂತ ಅದ್ಧೂರಿಯಾಗಿ ಜರುಗಲಿದೆ.

ಈ ಕುರಿತು ಸಮಿತಿ ಮುಖ್ಯಸ್ಥ ರವೀಂದ್ರ ಪಂಡಿತ ಮಾತನಾಡಿ, ಸಮಿತಿಯ 12 ಮಂದಿ ಶೃಂಗೇರಿಗೆ ಹೋಗಿ ಪಂಚಲೋಹ ಮೂರ್ತಿ ಪಡೆಯುತ್ತೇವೆ. ಕಾಶ್ಮೀರದಲ್ಲಿ ದೇಗುಲ ನಿರ್ಮಾಣ ಕಾರ್ಯ ಪೂರ್ಣ ಮುಗಿದಿಲ್ಲ. ಹೀಗಾಗಿ ಸದ್ಯಕ್ಕೆ ಮೂರ್ತಿಯನ್ನು ಶೃಂಗೇರಿ ಅಥವಾ ಬೆಂಗಳೂರಿನಲ್ಲಿ ಇಡುತ್ತೇವೆ ಎಂದು ತಿಳಿಸಿದ್ದಾರೆ.

ಅಲ್ಲದೇ, ದೇಗುಲ ನಿರ್ಮಾಣಕ್ಕೆ 1.5 ಕೋಟಿ ವೆಚ್ಚ ಅಂದಾಜಿಸಲಾಗಿದೆ. ಗರ್ಭಗುಡಿ 12X12 ವಿಸ್ತೀರ್ಣ ಇದ್ದು, ದೇಗುಲಕ್ಕೆ ನಾಲ್ಕು ದಿಕ್ಕುಗಳಲ್ಲಿ ನಾಲ್ಕು ಬಾಗಿಲುಗಳು ಇವೆ. ಚಾವಣಿ, ನೆಲ ಹಾಸು, ಅಲಂಕಾರ ಕಾಮಗಾರಿಗಳು ಬಾಕಿ ಇವೆ. ದೇಗುಲಕ್ಕೆ ಸಾಗುವ ಹಾದಿ ಹದಗೆಟ್ಟಿದ್ದು ರಸ್ತೆ ನಿರ್ಮಾಣಕ್ಕೆ ಜಮ್ಮು-ಕಾಶ್ಮೀರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇವೆ ಎಂದು ತಿಳಿಸಿದರು.

2021ರ ಡಿಸೆಂಬರ್ 2ರಂದು ದೇಗುಲ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಗಿತ್ತು. 2023ರ ನವರಾತ್ರಿಗೆ ಉದ್ಘಾಟನೆ ನೆರವೇರಿಸಲು ಸಂಪೂರ್ಣ ತಯಾರಿ, ಹಾಗೂ ಸಿದ್ಧತೆ ನಡೆದಿದೆ ಎಂಬ ಮಾಹಿತಿಗಳು ಲಭ್ಯವಾಗುತ್ತಿದೆ.

ಇದನ್ನೂ ಓದಿ: ನಾಳೆ ಅರಮನೆಯಲ್ಲಿ ವಿಜಯದಶಮಿ: ಏನೆಲ್ಲಾ ಕಾರ್ಯಕ್ರಮಗಳು ಇರಲಿವೆ

Last Updated : Oct 5, 2022, 7:17 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.