ಚಿಕ್ಕಮಗಳೂರು: ಕೇಂದ್ರ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದೆ ಶೋಭಾ ಕರಂದ್ಲಾಜೆ ಮಕ್ಕಳ ಜೊತೆ ಸರದಿ ಸಾಲಲ್ಲಿ ಕುಳಿತು ಹಾಸ್ಟೆಲ್ ಊಟವನ್ನು ಸವಿದಿದ್ದಾರೆ.
ಶೋಭಾ ಕರಂದ್ಲಾಜೆ ಅವರು ಶುಕ್ರವಾರ ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಗಮಿಸಿದ್ದರು. ಈ ವೇಳೆ, ಮೂಡಿಗೆರೆ ತಾಲೂಕಿನ ಬಿದರಹಳ್ಳಿ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿದ್ದರು. ಭೇಟಿಯ ಬಳಿಕ ಹಾಸ್ಟೆಲ್ ಮಕ್ಕಳ ಜೊತೆ ಟೇಬಲ್ ಮೇಲೆ ಸರದಿ ಸಾಲಲ್ಲಿ ಕುಳಿತು ಊಟ ಮಾಡಿದ್ದಾರೆ.
ಊಟ ಮುಗಿಸಿ ಹೊರಬಂದಾಗಲೂ ಊಟಕ್ಕೆಂದು ಸರದಿ ಸಾಲಿನಲ್ಲಿ ನಿಂತಿದ್ದ ಮಕ್ಕಳನ್ನು ಆತ್ಮೀಯತೆಯಿಂದ ಮಾತನಾಡಿಸಿ, ಅವರ ಕುಂದು-ಕೊರತೆಯನ್ನು ಕೇಳಿದ್ದಾರೆ. ಮಕ್ಕಳಿರುವ ಜಾಗಕ್ಕೆ ಹೋಗಿ ಮಾತನಾಡಿಸಿದ ಸಚಿವರನ್ನು ಕಂಡು ಮಕ್ಕಳು ಸಂತಸ ವ್ಯಕ್ತಪಡಿಸಿದ್ದಾರೆ.
ಶೋಭಾ ಮಕ್ಕಳಿಗೆ ಚೆನ್ನಾಗಿದ್ದೀರಾ? ಎಂದು ಕೇಳಿದಾಗ, ಮಕ್ಕಳು ಹೌದು ಮೇಡಂ, ನೀವು ಚೆನ್ನಾಗಿದ್ದೀರಾ? ಎಂದು ಆತ್ಮೀಯತೆಯಿಂದಲೇ ಮಾತನಾಡಿಸಿದರು.