ETV Bharat / state

ಶೃಂಗೇರಿ ಬಾಲಕಿ ಮೇಲಿನ ಅತ್ಯಾಚಾರ ಖಂಡನೀಯ : ಶೋಭಾ ಕರಂದ್ಲಾಜೆ

ಈ ಪ್ರಕರಣ ಗಂಭೀರವಾಗಿದೆ. ಅಪ್ರಾಪ್ತ ಬಾಲಕಿಯ ಭವಿಷ್ಯದ ವಿಚಾರವಾಗಿರುವುದರಿಂದ, ಮಾಧ್ಯಮಕ್ಕೆ ಬಹಿರಂಗ ಹೇಳಿಕೆ ನೀಡುವುದು ಸರಿಯಲ್ಲ ಎಂಬುದು ನನ್ನ ಅಭಿಪ್ರಾಯವಾಗಿದೆ. ಈ ಪ್ರಕರಣದ ಬಗ್ಗೆ ನಿತ್ಯ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದೇನೆ..

Shobha Karandlaje
ಶೋಭಾ ಕರಂದ್ಲಾಜೆ
author img

By

Published : Feb 3, 2021, 5:41 PM IST

ಚಿಕ್ಕಮಗಳೂರು : ಶೃಂಗೇರಿಯ ಬಾಲಕಿಯ ಮೇಲೆ ನಡೆದ ಬಲಾತ್ಕಾರ, ಅತ್ಯಾಚಾರ ಅತ್ಯಂತ ಖಂಡನೀಯ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಈ ಬಗ್ಗೆ ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

ಈ ಘಟನೆ ಬೆಳಕಿಗೆ ಬಂದ ತಕ್ಷಣವೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸಂಪರ್ಕ ಮಾಡಿ ತಪ್ಪಿತಸ್ಥರನ್ನು ಬಂಧಿಸಲು ಮತ್ತು ಬಾಲಕಿಗೆ ಸೂಕ್ತ ರಕ್ಷಣೆ ಕೊಡವಂತೆ ಸೂಚನೆ ನೀಡಿದ್ದೇನೆ. ಬಾಲಕಿಯನ್ನು ಸಾಂತ್ವನ ಕೇಂದ್ರಕ್ಕೆ ಸೇರಿಸಿದ ತಕ್ಷಣದಲ್ಲಿಯೇ ತಪ್ಪಿತಸ್ಥರನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿಸಿದ್ದಾರೆ.

press release
ಪತ್ರಿಕಾ ಪ್ರಕಟಣೆ

ಬಾಲಕಿಯನ್ನು ಕರೆ ತಂದು ದುರುಪಯೋಗ ಮಾಡಿದ ಅವಳ ಚಿಕ್ಕಮ್ಮ ಎಂದು ಕರೆಯಲ್ಪಡುವ ಗೀತಾಳನ್ನು ಕೂಡ ಬಂಧಿಸಿ ವಿಚಾರಿಸಲಾಗುತ್ತಿದೆ. ಎಸ್‌ಎಸ್‌ಎಲ್‌ಸಿ ಓದುವ ಹುಡುಗಿ ತನ್ನ ಊರಿನಿಂದ ಇಲ್ಲಿಗೆ ಯಾಕೆ ಬಂದಳು? ಯಾಕೆ ಅವಳನ್ನು ಚಿಕ್ಕಮ್ಮ ದುರುಪಯೋಗ ಮಾಡಿದಳು? ಇದೇ ರೀತಿ ಇನ್ಯಾವ ಹುಡುಗಿಯ ಜೊತೆ ಗೀತಾ ಸಂಪರ್ಕ ಬೆಳೆಸಿದ್ದಾಳೆ ಎಂಬುದರ ಕುರಿತು ಕೂಡ ತನಿಖೆ ಮಾಡಲು ಪೊಲೀಸರಿಗೆ ಸೂಚನೆ ನೀಡಲಾಗಿದೆ.

ಈ ಪ್ರಕರಣ ಗಂಭೀರವಾಗಿದೆ. ಅಪ್ರಾಪ್ತ ಬಾಲಕಿಯ ಭವಿಷ್ಯದ ವಿಚಾರವಾಗಿರುವುದರಿಂದ, ಮಾಧ್ಯಮಕ್ಕೆ ಬಹಿರಂಗ ಹೇಳಿಕೆ ನೀಡುವುದು ಸರಿಯಲ್ಲ ಎಂಬುದು ನನ್ನ ಅಭಿಪ್ರಾಯವಾಗಿದೆ. ಈ ಪ್ರಕರಣದ ಬಗ್ಗೆ ನಿತ್ಯ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದೇನೆ. ಈ ಕೇಸನ್ನು ನಿಗಾವಹಿಸಿ ಗಮನಿಸಲಾಗುತ್ತಿದೆ ಎಂದು ಪತ್ರಿಕಾ ಪ್ರಕಟಣೆಯನ್ನು ಸಂಸದೆ ಶೋಭಾ ಕರಂದ್ಲಾಜೆ ಅವರು ಹೊರಡಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.