ಚಿಕ್ಕಮಗಳೂರು: ಕೆಫೆ ಕಾಫೀ ಡೇ ಸಂಸ್ಥಾಪಕ ಸಿದ್ಧಾರ್ಥ್ ಹೆಗ್ಡೆ ಅವರು ಸಾವನ್ನಪ್ಪಿದ್ದ ಹಿನ್ನೆಲೆಯಲ್ಲಿ, ನಗರದ ವಿಜಯಪುರದಲ್ಲಿ ಜಿಲ್ಲಾ ಒಕ್ಕಲಿಗರ ಸಂಘದಿಂದ ಭಾವ ಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಸುಮಾರು ಎರಡು ಸಾವಿರಕ್ಕೂ ಅಧಿಕ ಜನರು ಭಾಗವಹಿಸಿದ್ದರು. ಕಾಫೀ ಡೇಯಲ್ಲಿ ಕಾರ್ಯ ನಿರ್ವಹಿಸುವ ಕಾರ್ಮಿಕರು, ಅಂಧ ಮಕ್ಕಳು, ಗಣ್ಯರು, ಹಿತೈಷಿಗಳು, ಸ್ನೇಹಿತರು ಸೇರಿದಂತೆ ರಾಜಕೀಯ ನಾಯಕರು ಭಾಗವಹಿಸಿ ಸಿದ್ಧಾರ್ಥ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಈ ವೇಳೆ ಒಂದು ನಿಮಿಷಗಳ ಕಾಲ ಮೌನಾಚರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ವಿಧಾನ ಪರಿಷತ್ ಉಪ ಸಭಾಪತಿ ಎಸ್ ಎಲ್ ಧರ್ಮೇಗೌಡ, ಶಾಸಕ ಸಿ ಟಿ ರವಿ, ಕಾಂಗ್ರೆಸ್ ಮುಖಂಡ ಬಿ ಎಲ್ ಶಂಕರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.