ETV Bharat / state

ಜನಪ್ರತಿನಿಧಿಗಳನ್ನೂ ಕಾಡುತ್ತಿದೆ ಕೊರೊನಾ: ಶೃಂಗೇರಿ ಶಾಸಕರಿಗೆ ಸೋಂಕು ದೃಢ - ಚಿಕ್ಕಮಗಳೂರು

ವಿಧಾನಪರಿಷತ್ ಸದಸ್ಯ ಎಸ್. ಎಲ್ ಭೋಜೇಗೌಡ ಹಾಗೂ ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ ರಾಜೇಗೌಡರಿಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ.

ಕಾಂಗ್ರೆಸ್ ಶಾಸಕ ಟಿ.ಡಿ ರಾಜೇಗೌಡರಿಗೆ ಕೊರೊನಾ
ಕಾಂಗ್ರೆಸ್ ಶಾಸಕ ಟಿ.ಡಿ ರಾಜೇಗೌಡರಿಗೆ ಕೊರೊನಾ
author img

By

Published : Jul 9, 2020, 8:07 AM IST

ಚಿಕ್ಕಮಗಳೂರು: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಕಳೆದ ಮೂರು ದಿನಗಳ ಹಿಂದೆ ವಿಧಾನಪರಿಷತ್ ಸದಸ್ಯ ಎಂ.ಕೆ ಪ್ರಾಣೇಶ್ ಅವರಿಗೂ ಸೋಂಕು ದೃಢಪಟ್ಟಿತ್ತು. ಇದೀಗ ಇನ್ನೋರ್ವ ಸದಸ್ಯ ಎಸ್. ಎಲ್ ಭೋಜೇಗೌಡ ಹಾಗೂ ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ ರಾಜೇಗೌಡರಿಗೂ ಕೊರೊನಾ ಸೋಂಕು ಇರುವುದು ದೃಢವಾಗಿದೆ.

ಕಳೆದ ಕೆಲ ದಿನಗಳ ಹಿಂದೆ ಬೆಂಗಳೂರಿಗೆ ಶಾಸಕರು ಹೋಗಿ ಬಂದಿದ್ದರು. ಈ ಹಿನ್ನೆಲೆಯಲ್ಲಿ ಶಾಸಕರಿಗೆ ಹಾಗೂ ಅವರ ಕುಟುಂಬದ ಸದಸ್ಯರು ಸೇರಿ ಒಟ್ಟು 13 ಜನರಿಗೆ ಕೊರೊನಾ ಪರೀಕ್ಷೆ ನಡೆಸಲಾಗಿತ್ತು. ಅದರಲ್ಲಿ 12 ಜನರ ವರದಿ ನೆಗೆಟಿವ್​ ಬಂದಿದ್ದು, ರಾಜೇಗೌಡರಿಗೆ ಕೊರೊನಾ ಇದೆ ಎಂದು ತಿಳಿದಿದೆ. ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಲಿದ್ದಾರೆ ಎಂದು ಆಪ್ತ ಮೂಲಗಳಿಂದ ತಿಳಿದುಬಂದಿದೆ.

ಜಿಲ್ಲೆಯಲ್ಲಿ ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳಗಳನ್ನು ಕೊರೊನಾ ಬೆಂಬಿಡದಂತೆ ಕಾಡುತ್ತಿದ್ದು, ಭೀತಿಯ ವಾತಾವರಣ ಮನೆ ಮಾಡಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.