ಚಿಕ್ಕಮಗಳೂರು: ನಡೆದಾಡುವ ದೇವರು ತುಮಕೂರಿನ ಸಿದ್ಧಗಂಗಾ ಶ್ರೀ ಶಿವಕುಮಾರ ಸ್ವಾಮೀಜಿ ನೊಬೆಲ್ ಪ್ರಶಸ್ತಿ ಪಡೆಯಲು ಎಲ್ಲಾ ರೀತಿಯಲ್ಲೂ ಅರ್ಹರಿದ್ದಾರೆ ಎಂದು ವಿವಿಧ ಸ್ವಾಮೀಜಿಗಳು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬಾಸೂರು ಗ್ರಾಮದಲ್ಲಿ ನಡೆದ ನಡೆದಾಡುವ ದೇವರು ಶಿವಕುಮಾರ ಶ್ರೀಗಳ ಪುಣ್ಯಸ್ಮರಣೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಜಿಲ್ಲೆಯ ಪ್ರಮುಖ ಎಲ್ಲಾ ಸ್ವಾಮೀಜಿಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸಿದ್ಧಗಂಗಾ ಶ್ರೀಗಳ ಪುಣ್ಯ ಸ್ಮರಣೆ ಕಾರ್ಯಕ್ರಮಕ್ಕೂ ಮುನ್ನ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಿದ್ಧಗಂಗಾ ಶ್ರೀಗಳ ಭಾವಚಿತ್ರದೊಂದಿಗೆ ಭವ್ಯ ಮೆರವಣಿಗೆ ನಡೆಸಲಾಯಿತು. ಸಿದ್ಧಗಂಗಾ ಶ್ರೀಗಳು ದಾರಿ ದೀಪವಾಗಿ, ಮಾರ್ಗದರ್ಶಕರಾಗಿ, ಬಸವಣ್ಣ, ಅಂಬೇಡ್ಕರ್, ಬುದ್ಧ, ವಿವೇಕಾನಂದ ಇವರನ್ನು ನಾವು ಯಾರೂ ನೋಡಿಲ್ಲ. ಆದರೆ ವಿಶ್ವದ 8 ನೇ ಅದ್ಭುತವಾದ ಸಿದ್ಧಗಂಗಾ ಶ್ರೀಗಳನ್ನ ನಾವೆಲ್ಲಾ ನೋಡಿರುವುದೇ ನಮ್ಮ ಪುಣ್ಯ ಎಂದು ಹೇಳಿದರು.
ಶ್ರೀಗಳ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಸಿಂದಿಗೆರೆ ಗರಡಿ ಗವಿಮಠದ ಶ್ರೀ ಶಂಕರನಾಂದ ಸ್ವಾಮಿಜಿ, ಯಳನಡು ಮಠದ ಶ್ರೀ ಜ್ಞಾನಪ್ರಭು ಸಿದ್ದರಾಮದೇಶಿಕೇಂದ್ರ ಸ್ವಾಮೀಜಿಗಳು ಹಾಜರಿದ್ದರು.