ETV Bharat / state

ಪರಿಷತ್ ಸದಸ್ಯ ಭೋಜೇಗೌಡ ನೇತೃತ್ವದಲ್ಲಿ ಮೌನ ಪ್ರತಿಭಟನೆ

author img

By

Published : Aug 15, 2020, 12:25 PM IST

ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ನೇತೃತ್ವದಲ್ಲಿ ಚಿಕ್ಕಮಗಳೂರಿನಲ್ಲಿ ಮೌನ ಪ್ರತಿಭಟನೆ ನಡೆಸಲಾಯಿತು.

protest in Chikmagalur
ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ನೇತೃತ್ವದಲ್ಲಿ ಮೌನ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ನೆರೆ ನಿರ್ವಹಿಸುವಲ್ಲಿ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಬಿಜೆಪಿ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳ ಕಾರ್ಯಕರ್ತರು ಕೋರ್ಟ್ ಆವರಣದ ಪಕ್ಕದಲ್ಲಿರುವ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಮೌನ ಪ್ರತಿಭಟನೆ ನಡೆಸಿದ್ದಾರೆ.

ಜಿಲ್ಲಾ ಆಡಳಿತ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸದೆ ಜೆಡಿಎಸ್​​ನ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಹಾಗೂ ವಿವಿಧ ಸಂಘಟನೆಗಳ ಮುಖಂಡರು ನಗರದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಕೊರೊನಾ ಸೋಂಕು ಹಾಗೂ ನೆರೆ ನಿರ್ವಹಣೆ ಮಾಡುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಹಾಗೂ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಅವರು ಆರೋಪಿಸಿದರು. ಪ್ರತಿಭಟನೆಗೆ ಜಿಲ್ಲೆಯ ಹಲವು ಪ್ರಗತಿಪರ ಸಂಘಟನೆಗಳು ಸಾಥ್ ನೀಡಿದವು.

ಜಿಲ್ಲಾ ಆಟದ ಮೈದಾನದಲ್ಲಿ ಜಿಲ್ಲಾಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯುತ್ತಿದ್ದರೆ, ಇತ್ತ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.