ETV Bharat / state

ಕಸಾಪ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದೇನೆ, ಮತ ನೀಡಿ; ರಾಜಶೇಖರ ಮುಲಾಲಿ - ಸಾಮಾಜಿಕ ಕಾರ್ಯಕರ್ತ ರಾಜಶೇಖರ ಮುಲಾಲಿ

ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಸಾಮಾಜಿಕ ಕಾರ್ಯಕರ್ತ ರಾಜಶೇಖರ ಮುಲಾಲಿ ಇಂದು ಚಿಕ್ಕಮಗಳೂರಿಗೆ ಭೇಟಿ ನೀಡಿ, ಎಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರು ಮತ ನೀಡಬೇಕೆಂದು ಮನವಿ ಮಾಡಿದರು.

Rajasekhara Mulali
ರಾಜಶೇಖರ ಮುಲಾಲಿ
author img

By

Published : Mar 11, 2021, 5:31 PM IST

ಚಿಕ್ಕಮಗಳೂರು: ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ಸ್ಪರ್ಧೆ ಮಾಡಿದ್ದು, ಅದೇ ಕಾರಣಕ್ಕಾಗಿ ಚಿಕ್ಕಮಗಳೂರಿಗೆ ಬಂದಿದ್ದೇನೆ ಎಂದು ಸಾಮಾಜಿಕ ಕಾರ್ಯಕರ್ತ ರಾಜಶೇಖರ ಮುಲಾಲಿ ಹೇಳಿದರು.

ಸಾಮಾಜಿಕ ಕಾರ್ಯಕರ್ತ ರಾಜಶೇಖರ ಮುಲಾಲಿ

ಚಿಕ್ಕಮಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಾಗಲೇ ನಾನು 20 ಜಿಲ್ಲೆಗಳ ಪ್ರವಾಸವನ್ನು ಪೂರ್ಣ ಮಾಡಿದ್ದು, ಮೊದಲ ಬಾರಿಗೆ ಚಿಕ್ಕಮಗಳೂರು ಜಿಲ್ಲೆಗೆ ಬಂದಿದ್ದೇನೆ. ಎಲ್ಲರು ನನ್ನಂಥ ಹೋರಾಟಗಾರನಿಗೆ ಸಹಕರಿಸಬೇಕು ಎಂದರು.

ಅಲ್ಲದೇ ಮೊದಲ ಬಾರಿಗೆ 115 ವರ್ಷಗಳ ನಂತರ ಒಬ್ಬ ಯುವಕ ಸ್ಪರ್ಧೆ ಮಾಡಿದ್ದಾನೆ. ಬರೀ ನಿವೃತ್ತರ ತಾಣ, ಗಂಜಿ ಕೇಂದ್ರ, ತುಕ್ಕು ಹಿಡಿದ ಜಾಗ ಎಂದು ಕೆಲವರು ಹೇಳುತ್ತಿದ್ದರು. ಇವೆಲ್ಲ ಕಪ್ಪು ಚುಕ್ಕೆಗಳನ್ನು ಅಳಿಸಿ ಹಾಕಲು ನಾನು ನನ್ನದೇ ಆದ ರೀತಿಯಲ್ಲಿ ಕೆಲಸ ಮಾಡುತ್ತೇನೆ. ಚಿಕ್ಕಮಗಳೂರು ಹಾಗೂ ಕರ್ನಾಟಕದ ಎಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರು ನನಗೆ ಮತ ನೀಡಬೇಕು. ಎಲ್ಲರೂ ಸಹಕರಿಸಬೇಕು ಎಂದು ಹೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.