ಚಿಕ್ಕಮಗಳೂರು: ಶೃಂಗೇರಿ ನಗರದ ಸ್ವಾಗತ ಗೋಪುರದ ಬಳಿಯಿರುವ ಶ್ರೀ ಶಂಕರಾಚಾರ್ಯ ಪುತ್ಥಳಿಯ ಮೇಲೆ ಅನ್ಯ ಕೋಮಿನ ಧ್ವಜ ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ವಿಶೇಷ ತಂಡ ರಚನೆ ಮಾಡಿದೆ.
ಸುಮಾರು 10 ಜನರ ವಿಶೇಷ ಪೊಲೀಸ್ ತಂಡ ರಚನೆಯಾಗಿದ್ದು, ಚಿಕ್ಕಮಗಳೂರು ಹಾಗೂ ಕೊಪ್ಪ ಡಿವೈಎಸ್ಪಿ ನೇತೃತ್ವದಲ್ಲಿ ಈ ತಂಡವನ್ನು ರಚಿಸಲಾಗಿದೆ.
ಈ ಕೃತ್ಯ ಎಸಗಿದ ಕಿಡಿಗೇಡಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಮಠದ ಭಕ್ತರು ಹಾಗೂ ಶೃಂಗೇರಿಯ ಮಾಜಿ ಶಾಸಕ ಡಿ.ಎನ್. ಜೀವರಾಜ್ ನಿನ್ನೆ ಪ್ರತಿಭಟನೆ ಮಾಡಿ ಆಗ್ರಹಿಸಿದರು.
ಘಟನೆ ಸಂಬಂಧ ಶೃಂಗೇರಿ ಪೊಲೀಸರು ಈಗಾಗಲೇ ಇಬ್ಬರನ್ನು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ.