ಚಿಕ್ಕಮಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಮತ್ತೆ ಆಯ್ಕೆಯಾಗಬೇಕು ಎಂದು ಯುವಕನೊಬ್ಬ ಉರುಳು ಸೇವೆ ಮಾಡಿದ್ದಾನೆ.
ಜಿಲ್ಲೆಯ ಎನ್.ಆರ್ ಪುರ ತಾಲೂಕಿನ ಬಾಳೆಹೊನ್ನೂರು ಮಠದ ಆವರಣದಲ್ಲಿರುವ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಕೊಪ್ಪ ತಾಲೂಕಿನ ಹೆರೂರು ಗ್ರಾಮದ ಸುನೀಲ್ ನಿಡುವಾನೆ ಎಂಬ ಯುವಕ ಉರುಳು ಸೇವೆ ಮಾಡಿ, ವಿಶೇಷ ಪೂಜೆ ಸಲ್ಲಿಸಿದ್ದಾನೆ. ಮತ್ತೊಮ್ಮೆ ಯಡಿಯೂರಪ್ಪ ಮುಖ್ಯಮಂತ್ರಿ ಆಗಲಿ ಎಂದು ಪ್ರಾರ್ಥನೆ ಮಾಡಿದ್ದಾನೆ.