ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಸ್ಟಾಫ್ ನರ್ಸ್ಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಬೋಧನಾ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಣೆಗಾಗಿ ಈ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 35 ಹುದ್ದೆಗಳ ಭರ್ತಿ ಕ್ರಮಕ್ಕೆ ಮುಂದಾಗಿದ್ದು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸಲ್ಲಿಸಬಹುದು.
ಹುದ್ದೆ ವಿವರ: ಆರು ತಿಂಗಳ ಗುತ್ತಿಗೆ ಅವಧಿಗೆ ನೇಮಕಾತಿ ನಡೆಯಲಿದ್ದು, ಹುದ್ದೆಗಳ ನವೀಕರಣ ಸರ್ಕಾರದ ಆದೇಶಕ್ಕೆ ಒಳಪಟ್ಟಿರುತ್ತದೆ. ಅಭ್ಯರ್ಥಿಗಳು ಕನಿಷ್ಠ 3 ವರ್ಷ ಅನುಭವ ಹೊಂದಿರಬೇಕು.
ವಿದ್ಯಾರ್ಹತೆ: ಬಿಎಸ್ಸಿ ನರ್ಸಿಂಗ್ ಕೋರ್ಸ್ ಪದವಿ ಹೊಂದಿರಬೇಕು. ಎಂಎಸ್ಸಿ ನರ್ಸಿಂಗ್ ಪದವಿ ಹೊಂದಿದ ಅಭ್ಯರ್ಥಿಗಳನ್ನು ಆದ್ಯತೆ ಮೇರೆಗೆ ಪರಿಗಣಿಸಲಾಗುವುದು.
ವೇತನ: ಮಾಸಿಕ 20 ಸಾವಿರ ಸಂಚಿತ ವೇತನ.
ಅರ್ಜಿ ಸಲ್ಲಿಕೆ: ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 250 ರೂ, ಸಾಮಾನ್ಯ ಅಭ್ಯರ್ಥಿಗಳಿಗೆ 500 ರೂ ಶುಲ್ಕ ನಿಗದಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಶೈಕ್ಷಣಿಕ ದಾಖಲೆ ಸೇರಿದಂತೆ ಇನ್ನಿತರ ಅಗತ್ಯ ಪ್ರಮಾಣ ಪತ್ರಗಳನ್ನು ನಿರ್ದೇಶಕರು ಕಚೇರಿ, ಹಳೆಯ ಪಿಡಬ್ಲ್ಯೂಡಿ ಬಿಲ್ಡಿಂಗ್, ಆಜಾದ್ ಪಾರ್ಕ್ ಹತ್ತಿರ, ಚಿಕ್ಕಮಗಳೂರು- 577101 ಇಲ್ಲಿಗೆ ರಿಜಿಸ್ಟರ್ ಪೋಸ್ಟ್ ಮೂಲಕ ಕಳುಹಿಸಲಾಗುವುದು.
ವಯೋಮಿತಿ: ಅಭ್ಯರ್ಥಿಗಳು ಕನಿಷ್ಟ 18 ವರ್ಷ ಗರಿಷ್ಠ 38 ವರ್ಷ ಮೀರಿರಬಾರದು. ಪರಿಶಿಷ್ಟ ಜಾರಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ 2ಎ, 3ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 2 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಮಾರ್ಚ್ 23 ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ಏಪ್ರಿಲ್ 10 ಕಡೆಯ ದಿನಾಂಕ.
ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಇನ್ನಿತರ ವಿವರ ಪಡೆಯಲು ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಅಧಿಕೃತ ಜಾಲತಾಣ cimschikkamagaluru.karnataka.gov.in ಗೆ ಭೇಟಿ ನೀಡಿ.
ಇದನ್ನೂ ಓದಿ: ಇಗ್ನೋದಲ್ಲಿ ಉದ್ಯೋಗಾವಕಾಶ.. 200 ಟೈಪಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ