ಚಿಕ್ಕಮಗಳೂರು: ಮುಂದಿನ ಅಧಿವೇಶನದಲ್ಲಿ ಸದಾಶಿವ ಆಯೋಗದ ವರದಿಯನ್ನು ಜಾರಿ ಮಾಡುವಂತೆ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮಾದಿಗ ಸಮಾಜದ ಮುಖಂಡ ಶಂಕರ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ನಮ್ಮ ಸಮಾಜದವರು ನೀವು ಬಿಜೆಪಿ ಪಕ್ಷಕ್ಕೆ ಸೇರಿದ್ದೀರಿ ನಮಗೇನು ಅನುಕೂಲವಾಗುತ್ತೆ ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಬಿಜೆಪಿಯಿಂದ ನಮ್ಮ ಸಮುದಾಯಕ್ಕೆ ಹಲವು ಬಾರಿ ಅನುಕೂಲವಾಗಿದೆ. ಬಿಜೆಪಿ ಪಕ್ಷ ನುಡಿದಂತೆ ನಡೆದುಕೊಂಡಿದೆ. ಸರ್ಕಾರ ಸದಾಶಿವ ಆಯೋಗದ ವರದಿ ಜಾರಿಗೆ ತರಲು ಚಿಂತನೆ ನಡೆಸುತ್ತಿದೆ. ಒಂದು ವೇಳೆ ಜಾರಿಗೆ ತರದಿದ್ದರೆ ಪಕ್ಷದಿಂದ ಹೊರಗಡೆ ಬರುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಕಳೆದ ಶಿರಾ ಹಾಗೂ ಆರ್.ಆರ್ ನಗರ ಉಪ ಚುನಾವಣೆಯಲ್ಲಿ ಮಾದಿಗ ಸಮುದಾಯದವರು ಬಿಜೆಪಿಗೆ ಮತ ನೀಡಿ ಬಿಜೆಪಿ ಗೆಲುವಿಗೆ ಕಾರಣರಾಗಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನಮ್ಮ ಸಮುದಾಯದ ಪರ ಒಲವು ತೋರಿದ್ದಾರೆ. ಈ ಬಾರಿಯಾದರೂ ಸದಾಶಿವ ಆಯೋಗದ ವರದಿ ಜಾರಿಗೆ ತರುವಂತೆ ಕೇಳಿಕೊಂಡಿದ್ದೇನೆ. ಮುಂದಿನ ಅಧಿವೇಶನದಲ್ಲಿ ಜಾರಿಗೆ ತರುವ ಸಾದ್ಯತೆ ಇದೆ ಎಂದರು.