ETV Bharat / state

ಚಿಕ್ಕಮಗಳೂರು: ಭದ್ರಾ ಹಿನ್ನೀರಿಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ - Student commits suicide by jumping into river

ಭದ್ರಾ ನದಿಯ ಹಿನ್ನೀರಿಗೆ ಹಾರಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

ವಿದ್ಯಾರ್ಥಿನಿ ಆತ್ಮಹತ್ಯೆ
ವಿದ್ಯಾರ್ಥಿನಿ ಆತ್ಮಹತ್ಯೆ
author img

By

Published : Dec 16, 2021, 12:05 PM IST

ಚಿಕ್ಕಮಗಳೂರು: ಕಾಲೇಜು ವಿದ್ಯಾರ್ಥಿನಿಯೋರ್ವಳು ಭದ್ರಾ ನದಿಯ ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬಾಳೆಕೊಪ್ಪ ಗ್ರಾಮದ ಸ್ಪಂದನಾ (18) ಹಿನ್ನೀರಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿನಿ.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಈ ವಿದ್ಯಾರ್ಥಿನಿ, ಎಂದಿನಂತೆ ಬುಧವಾರ ಕಾಲೇಜಿಗೆ ತೆರಳಿ ಸಂಜೆ ತಡವಾದರೂ ಮನೆಗೆ ಬಾರದ ಕಾರಣ ಪೋಷಕರು ಆತಂಕಕ್ಕೀಡಾಗಿದ್ದರು.

ಇಂದು ಮೆಣಸೂರು ಸೇತುವೆಯ ಸಮೀಪ ಶವವೊಂದು ನೀರಿನಲ್ಲಿ ತೇಲುವುದನ್ನು ಗಮನಿಸಿದ ಸಾರ್ವಜನಿಕರು, ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಎನ್ ಆರ್ ಪೊಲೀಸರು ಸಾರ್ವಜನಿಕರ ಸಹಾಯದಿಂದ ಮೃತದೇಹವನ್ನು ಮೇಲಕ್ಕೆತ್ತಿ ವಿದ್ಯಾರ್ಥಿನಿಯನ್ನು ಗುರುತಿಸಿದ್ದಾರೆ.

ಸ್ಪಂದನಾಳ ತಂದೆ ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಮೃತಪಟ್ಟಿದ್ದರು. ಈ ನೋವಿನಿಂದ ಬೇಸತ್ತು ಆಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ತಾಯಿ ಪೊಲೀಸರಿಗೆ ತಿಳಿಸಿದ್ದಾರೆ. ಈ ಕುರಿತು ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದು, ಎನ್ ಆರ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.