ಚಿಕ್ಕಮಗಳೂರು: ಬೆಳಗಾವಿ ಮೂಲದ ಸೂಪರ್ ವೈಸರ್ ಚಿಕ್ಕಮಗಳೂರು ಜಿಲ್ಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಸಾವಿಗೆ ಶರಣಾದ ವ್ಯಕ್ತಿಯನ್ನು ಬಸವರಾಜ್ ಲಿಂಗಪ್ಪ (47) ಎಂದು ಗುರುತಿಸಲಾಗಿದೆ. ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಲಾಡ್ಜ್‌ನಲ್ಲಿ ಘಟನೆ ನಡೆದಿದೆ.
ಸದ್ಯ ಒಬ್ಬ ಗುತ್ತಿಗೆದಾರನ ಬಳಿ ಸೂಪರ್‌ವೈಸರ್ ಆಗಿ ಲಿಂಗಪ್ಪ ಕೆಲಸ ಮಾಡುತ್ತಿದ್ದರು. ಕಳೆದ 10 ದಿನಗಳಿಂದ ಬಾಳೆಹೊನ್ನೂರಿನಲ್ಲಿದ್ದು ಕೆಲಸ ಮಾಡುತ್ತಿದ್ದರು. ಕಳೆದ ಆರು ವರ್ಷಗಳಿಂದ ಬೇರೆ ಗುತ್ತಿಗೆದಾರನ ಬಳಿ ಕೆಲಸ ಮಾಡಿದ್ದು, ಆರು ವರ್ಷದ ಕೆಲಸದ ಸಂಬಳ ನೀಡದ ಕಾರಣ ನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದೆ.
ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು, ಕುಟುಂಬಸ್ಥರಿಗಾಗಿ ಪೊಲೀಸರು ಕಾಯುತ್ತಿದ್ದಾರೆ. ಲಾಡ್ಜ್‌ನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ಬಾಳೆಹೊನ್ನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ : ‘ಕಾಲಿಗೆ ಬೀಳುತ್ತೇನೆ, ನನ್ನನ್ನು ಬಿಟ್ಟು ಬಿಡಿ’; ಯಾದಗಿರಿಯಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ!