ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿಯ ಶಾರದಾ ಪೀಠಕ್ಕೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ ಬೊಬ್ಡೆ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ.
ಶಾರದಾ ಪೀಠಕ್ಕೆ ಬೊಬ್ಡೆ ಆಗಮಿಸುತ್ತಿದ್ದಂತೆಯೇ ದೇವಸ್ಥಾನದ ಆಡಳಿತ ಮಂಡಳಿ ಅದ್ಧೂರಿಯಾಗಿ ಸ್ವಾಗತಿಸಿದೆ. ನಂತರ ನೇರವಾಗಿ ಶೃಂಗೇರಿ ದೇವಸ್ಥಾನಕ್ಕೆ ತೆರಳಿದ್ದ ಮುಖ್ಯ ನ್ಯಾಯಮೂರ್ತಿಗಳು ಶಾರದಾಂಬೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಬಳಿಕ ನರಸಿಂಹ ವನದಲ್ಲಿರುವ ಜಗದ್ಗುರುಗಳ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ. ಎರಡನೇ ಬಾರಿಗೆ ಶೃಂಗೇರಿಗೆ ಸುಪ್ರಿಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಭೇಟಿ ನೀಡಿರುವುದು ವಿಶೇಷವಾಗಿದೆ.