ETV Bharat / state

ಶೃಂಗೇರಿ ತಹಶೀಲ್ದಾರ್ ಕಾರು ಚಾಲಕ ಆತ್ಮಹತ್ಯೆ ಕೇಸ್​.. ಮೃತದೇಹ ಆಸ್ಪತ್ರೆ ಮುಂದಿಟ್ಟು ಪ್ರತಿಭಟನೆ

ಶೃಂಗೇರಿ ತಹಸೀಲ್ದಾರ್ ಕಾರು ಚಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಅವರ ಮೃತದೇಹವನ್ನು ಶೃಂಗೇರಿಯ ತಾಲೂಕು ಆಸ್ಪತ್ರೆ ಆವರಣದ ಮುಂಭಾಗದಲ್ಲಿರಿಸಿ ಪ್ರತಿಭಟನೆ ನಡೆಸಲಾಗಿದೆ.

tahashildar car driver suicide case : protest at shringeri
ಶೃಂಗೇರಿಯಲ್ಲಿ ಪ್ರತಿಭಟನೆ
author img

By

Published : Jan 30, 2022, 4:00 PM IST

ಚಿಕ್ಕಮಗಳೂರು: ಶೃಂಗೇರಿಯ ತಹಶೀಲ್ದಾರ್ ಅವರ ವಾಹನ ಚಾಲಕ ವಿಜೇತ್ ಶನಿವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಹಿನ್ನೆಲೆ, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಿ, ಆತನ ಸಾವಿಗೆ ನ್ಯಾಯ ದೊರಕಿಸಿ ಕೊಡಬೇಕೆಂದು ಆಗ್ರಹಿಸಿ ಸಂಬಂಧಿಕರು ಹಾಗೂ ಶೃಂಗೇರಿಯ ಜನರು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮರಣೋತ್ತರ ಪರೀಕ್ಷೆಯ ನಂತರ ಚಾಲಕ ವಿಜೇತ್ ಅವರ ಮೃತದೇಹವನ್ನು ಶೃಂಗೇರಿಯ ತಾಲೂಕು ಆಸ್ಪತ್ರೆ ಆವರಣದ ಮುಂಭಾಗದಲ್ಲಿರಿಸಿ ಪ್ರತಿಭಟನೆ ನಡೆಸಿದ್ದಾರೆ.

ಭ್ರಷ್ಟ ಅಧಿಕಾರಿಗಳ ಕೈವಾಡದಿಂದಾಗಿ ಅಮಾಯಕ ಯುವಕನ ಬಲಿಯಾಗಿದೆ. ಹಾಗಾಗಿ ತಪ್ಪಿತಸ್ಥರಿಗೆ ಈ ಕೂಡಲೇ ಶಿಕ್ಷೆಯಾಗಬೇಕು. ಕುಟುಂಬಕ್ಕೆ ಆಸರೆಯಾಗಿ ನಿಲ್ಲಬೇಕಿದ್ದ ಯುವಕನ ಸಾವಿನ ಹಿಂದಿರುವ ಆರೋಪಿಗಳಿಗೆ ಶಿಕ್ಷೆಯಾಗಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ತಹಶೀಲ್ದಾರ್ ಕಾರು ಚಾಲಕ ಆತ್ಮಹತ್ಯೆ ಕೇಸ್​- ಶೃಂಗೇರಿಯಲ್ಲಿ ಪ್ರತಿಭಟನೆ

ಸ್ಥಳಕ್ಕಾಗಮಿಸಿದ ಎ.ಸಿ. ನಾಗರಾಜ್ ಅವರನ್ನು ಕುಟುಂಬಸ್ಥರು ಹಾಗೂ ಸಾರ್ವಜನಿಕರು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಭ್ರಷ್ಟ ಅಧಿಕಾರಿಗಳಿಗೆ ಧಿಕ್ಕಾರ ಎಂದು ಕೂಗುವ ಮೂಲಕ ಕಿಡಿಕಾರಿದರು.

ಇದನ್ನೂ ಓದಿ: ಶೃಂಗೇರಿ ತಹಸೀಲ್ದಾರ್ ಕಾರು ಚಾಲಕ ಆತ್ಮಹತ್ಯೆಗೆ ಶರಣು.. ಕಾರಣ ನಿಗೂಢ!

ಈ ಕೂಡಲೇ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಆಗಮಿಸಿ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಬೇಕು. ಹಾಗೂ ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದರು.

ಲಕ್ಷಾಂತರ ರೂಪಾಯಿ ಭ್ರಷ್ಟಾಚಾರ ಆರೋಪ ಶೃಂಗೇರಿ ತಹಶೀಲ್ದಾರ್ ಅಂಬುಜಾ ಮೇಲಿದೆ. ಈ ಸಂಬಂಧ ಕೆಲ ದಿನಗಳ ಹಿಂದೆ ಎಸಿಬಿ ಅಧಿಕಾರಿಗಳು ಅವರನ್ನು ಬಂಧಿಸಿದ್ದರು. ಇದರ ಬೆನ್ನಲ್ಲೇ ಅವರ ಕಾರು ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವುದು ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.