ಚಿಕ್ಕಮಗಳೂರು: ತರೀಕೆರೆ ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆದಿದೆ. 23 ಕ್ಷೇತ್ರಗಳಲ್ಲಿ 15 ಕ್ಷೇತ್ರ ಕಾಂಗ್ರೆಸ್ ಗೆದ್ದಿದ್ದು, 7 ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಗಳು ಜಯ ಶೀಲರಾಗಿದ್ದಾರೆ. ಒಂದು ಕ್ಷೇತ್ರಕ್ಕೆ ಬಿಜೆಪಿ ತೃಪ್ತಿಪಟ್ಟುಕೊಂಡಿದೆ.
ಈ ಫಲಿತಾಂಶದಿಂದ ಹಾಲಿ ಶಾಸಕ ಡಿ.ಎಸ್.ಸುರೇಶ್ಗೆ ಭಾರಿ ಮುಖಭಂಗವಾಗಿದೆ. ಕಾಂಗ್ರೆಸ್ ತೆಕ್ಕೆಗೆ ತರೀಕೆರೆ ಪುರಸಭೆ ಬಂದಿದ್ದು, ಪಟಾಕಿ ಸಿಡಿಸಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ ಆಚರಿಸಿದ್ದಾರೆ.
ಇದನ್ನೂ ಓದಿ : ಬೆಳಗಾವಿಯಲ್ಲಿ MES ಗೆ ತೀವ್ರ ಮುಖಭಂಗ.. ಬಿಜೆಪಿ ತೆಕ್ಕೆಗೆ ಕುಂದಾನಗರಿ