ಚಿಕ್ಕಮಗಳೂರು: ಸಹಕಾರ ಸಾರಿಗೆ ಬಸ್ (ಟಿಸಿಎಸ್) ಚಾಲಕ ತನ್ನ ಸಹೋದರ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ನಡೆದಿದೆ.
ಗೋಪಾಲ್ ಪೂಜಾರಿ (55) ಆತ್ಮಹತ್ಯೆ ಮಾಡಿಕೊಂಡ ಚಾಲಕ. ಇವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇವರು ಖಾಸಗಿ ಬಸ್ ಒಂದಕ್ಕೆ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದರು. ಕೆಲ ಸಂಘಗಳಲ್ಲಿ ಮೂರು ಲಕ್ಷಕ್ಕೂ ಅಧಿಕ ಸಾಲ ಹೊಂದಿದ್ದರು ಎನ್ನಲಾಗುತ್ತಿದೆ.
ಘಟನಾ ಸ್ಥಳಕ್ಕೆ ಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.