ಚಿಕ್ಕಮಗಳೂರು: ಕೊವೀಡ್-19 ವೈರಸ್ ಹಿನ್ನೆಲೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸದೇ ಸ್ಥಗಿತಗೊಂಡಿದ್ದ 14 ಇಲಾಖೆಗಳು ಪುನಃ ಕಾರ್ಯನಿರ್ವಹಣೆ ಮಾಡುವಂತೆ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ.
ಪ್ರಮುಖವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಒಳಾಡಳಿತ ಇಲಾಖೆ, ಕಂದಾಯ ಇಲಾಖೆ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸಾರಿಗೆ ಇಲಾಖೆ, ಇಂಧನ ಇಲಾಖೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಅರ್ಥಿಕ ಇಲಾಖೆ, ಪಶುಸಂಗೋಪನೆ ಮತ್ತು ಮೀನುಗಾರಿಕಾ ಇಲಾಖೆ, ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯ ಸಿಬ್ಬಂದಿ ಸೇರಿದಂತೆ ಉಳಿದ ಎಲ್ಲಾ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರೂಪ್ ಎ ವೃಂದದ ಎಲ್ಲಾ ಅಧಿಕಾರಿಗಳು ಕರ್ತವ್ಯಕ್ಕೆ ಹಾಜರಾಗಬೇಕು.
ಈ ಎಲ್ಲಾ ಇಲಾಖೆಯ ಸಿಬ್ಬಂದಿ ತಮ್ಮ ಸ್ವಂತ ವಾಹನ ಅಥವಾ ಇಲಾಖೆಯ ವಾಹನದ ಮೂಲಕ ಗುರುತಿನ ಚೀಟಿಯೊಂದಿಗೆ ಕರ್ತವ್ಯಕ್ಕೆ ಹಾಜರು ಆಗಬೇಕು ಎಂದು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ.