ಚಿಕ್ಕಮಗಳೂರು: ನಗರದ ಎಂಜಿ ರಸ್ತೆಯಲ್ಲಿ ನಗರಸಭೆ ಸಿಬ್ಬಂದಿ ಫುಟ್ಪಾತ್ ತೆರವು ಮಾಡುವ ವೇಳೆ ಸಾರ್ವಜನಿಕರು ಹಾಗೂ ಸಿಬ್ಬಂದಿ ನಡುವೆ ಮಾತಿನ ಚಕಮಕಿ ನಡೆದಿದೆ.
ನಗರಸಭೆ ಸಿಬ್ಬಂದಿಯ ಅನುಚಿತ ವರ್ತನೆ ಖಂಡಿಸಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಸಾರ್ವಜನಿಕರು ಹಾಗೂ ನಗರಸಭೆಯ ಸಿಬ್ಬಂದಿ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಇದೇ ವೇಳೆ ನಗರಸಭೆಯ ಕೆಲ ಸಿಬ್ಬಂದಿ ಮಹಿಳೆಯರ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ ಎಂಬ ಆರೋಪವೂ ಕೇಳಿ ಬಂದಿದೆ.
ಸಾರ್ವಜನಿಕರು ಹಾಗೂ ನಗರಸಭೆ ಸಿಬ್ಬಂದಿ ನಡುವಿನ ಮಾತಿನ ಚಕಮಕಿ ತಾರಕ್ಕೇರಿದ ವೇಳೆ ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ವಾಗ್ವಾದ ತಿಳಿಗೊಳಿಸುವ ಪ್ರಯತ್ನ ಮಾಡಿದ್ದಾರೆ.