ಚಿಕ್ಕಮಗಳೂರು: ಜಿಲ್ಲೆಯ ಎನ್.ಆರ್.ಪುರ ತಾಲೂಕಿನಲ್ಲಿ ಮೂರು ಜನರಿಗೆ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆ ಬಾಳೆಹೊನ್ನೂರಿನ ಎಲ್ಲಾ ಕ್ಷೌರಿಕ ಅಂಗಡಿಗಳನ್ನು ಸ್ವಯಂ ಪ್ರೇರಿತವಾಗಿ ಮುಚ್ಚಲು ಕ್ಷೌರಿಕರು ತಿರ್ಮಾನ ತೆಗೆದುಕೊಂಡಿದ್ದಾರೆ.
ಜಿಲ್ಲೆಯ ಎನ್.ಆರ್.ಪುರ ತಾಲೂಕಿನಲ್ಲಿ ಮೂರು ಜನರಿಗೆ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆ ಬಾಳೆಹೊನ್ನೂರಿನ ಸವಿತಾ ಸಮಾಜದ ಕ್ಷೌರಿಕರು ಈ ತಿರ್ಮಾನ ತೆಗೆದುಕೊಂಡಿದ್ದಾರೆ. ಗುರುವಾರದಿಂದ ಮುಂದಿನ ತಿಂಗಳು 3ನೇ ತಾರೀಖಿನವರೆಗೂ ಎಲ್ಲಾ ಕ್ಷೌರಿಕ ಅಂಗಡಿಗಳು ಸ್ವಯಂ ಪ್ರೇರಿತವಾಗಿ ಮುಚ್ಚಲಾಗುವುದು ಎಂದು ತಿಳಿಸಿದ್ದಾರೆ.
ಎಲ್ಲಾ ಸದಸ್ಯರು ಸರ್ವಾನುಮತದಿಂದ ಈ ಮಹತ್ವದ ನಿರ್ಧಾರಕ್ಕೆ ಬಂದಿದ್ದು, ಒಟ್ಟು 14 ದಿನಗಳ ಕಾಲ ತಮ್ಮ ಕ್ಷೌರಿಕ ಅಂಗಡಿಗಳನ್ನು ಸ್ವಯಂ ಪ್ರೇರಿತರಾಗಿ ಮುಚ್ಚಲು ತಿರ್ಮಾನ ತೆಗೆದುಕೊಂಡಿದ್ದಾರೆ.