ಚಿಕ್ಕಮಗಳೂರು: ಕೊರೊನಾ ವೈರಸ್ ತಡೆಗಟ್ಟುವುದು ಸರ್ಕಾರದ ಕೆಲಸ ಮಾತ್ರವಲ್ಲ, ಪ್ರತಿಯೊಬ್ಬರ ಕರ್ತವ್ಯ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಹೇಳಿದರು.
ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದ ಘಟನೆ ತಲೆತಗ್ಗಿಸುವ ವಿಚಾರ. ಅಲ್ಲಿ ಅಧಿಕಾರಿಗಳು ತಮ್ಮ ಕರ್ತವ್ಯ ಮಾಡಿದ್ದಾರೆ. ಅವರ ಕರ್ತವ್ಯಕ್ಕೆ ಯಾರೂ ಅಡ್ಡಿಪಡಿಬಾರದು. ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಕಿಡಿಗೇಡಿಗಳ ವಿರುದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಸ್ಥಳಕ್ಕೆ ತೆರಳಿದ ಅಧಿಕಾರಿಗಳಿಗೆ ಸಹಕಾರ ನೀಡದೆ ಇರುವವರನ್ನು ದೇಶದ್ರೋಹಿಗಳು ಎಂದೂ ಕರೆಯಬೇಕು. ಎಂತಹ ಕಠಿಣ ಶಿಕ್ಷೆ ನೀಡಿದರೂ ಸಾಲದು. ಇದು ಸಮಾಜವೇ ತಲೆ ತಗ್ಗಿಸುವಂತಹ ವಿಚಾರ. ದಬ್ಬಾಳಿಕೆ ಮಾಡಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.