ಚಿಕ್ಕಮಗಳೂರು: ಜೋಡೆತ್ತಿನ ಗಾಡಿ ಸ್ಪರ್ಧೆ ವೇಳೆ ವ್ಯಕ್ತಿ ಸಾವನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
ಎತ್ತಿನಗಾಡಿ ಡಿಕ್ಕಿಯೊಡೆದು ಸ್ಥಳದಲ್ಲೇ ವ್ಯಕ್ತಿ ಸಾವನ್ನಪ್ಪಿದ್ದು, ಮೋಹನ್ (36) ಮೃತ ದುರ್ದೈವಿಯಾಗಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಸಖರಾಯಪಟ್ಟಣದ ಹೊನ್ನವರಿಕೆ ಗ್ರಾಮದಲ್ಲಿ ಈ ಜೋಡಿ ಎತ್ತಿನ ಗಾಡಿ ಸ್ಪರ್ಧೆ ಆಯೋಜನೆಗೊಂಡಿತ್ತು.
ತಡರಾತ್ರಿ ರೇಸ್ ವೇಳೆ ಈ ಅವಘಡ ಜರುಗಿದ್ದು, ಸಖರಾಯ ಪಟ್ಟಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.