ಚಿಕ್ಕಮಗಳೂರು : ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಮಳೆ ನಿಲ್ಲಿಸುವಂತೆ ಕೋರಿ ದೇವರಿಗೆ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿರುವ ಘಟನೆ ನಡೆದಿದೆ. ಜಿಲ್ಲೆಯ ಶೃಂಗೇರಿ ತಾಲೂಕಿನ ಕಿಗ್ಗಾದ ಋಷ್ಯ ಶೃಂಗೇಶ್ವರನಿಗೆ ಸ್ಥಳೀಯರು ವಿಶೇಷ ಪೂಜೆ ನೆರವೇರಿಸಿದ್ದಾರೆ. ಮಳೆ ದೇವರು ಎಂದೇ ಪ್ರಸಿದ್ಧಿ ಪಡೆದಿರುವ ಕಿಗ್ಗಾದ ಋಷ್ಯ ಶೃಂಗೇಶ್ವರ, ಮಳೆ ಬೇಕು ಅಂದಾಗ ಸುರಿಸೋ, ಬೇಡವೆಂದಾಗ ನಿಲ್ಲಿಸೋ ದೇವರೆಂಬ ನಂಬಿಕೆ ಇಲ್ಲಿನ ಜನರಲ್ಲಿದೆ.
ಈ ಬಾರಿ ಶೃಂಗೇರಿಯಲ್ಲಿ ವಾಡಿಕೆಗಿಂತ ಎರಡು ಪಟ್ಟು ಹೆಚ್ಚು ಮಳೆಯಾಗಿದ್ದು, ಸತತ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಕಾಫಿ, ಮೆಣಸು, ಅಡಕೆ ಬೆಳೆಗೆ ಕೊಳೆ ರೋಗದ ಭೀತಿ ಆವರಿಸಿದ್ದು, ಅತಿವೃಷ್ಟಿ ನಿವಾರಿಸು ಎಂದು ಋಷ್ಯಶೃಂಗನಿಗೆ ಸ್ಥಳೀಯರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಹಿಂದೆ ಅತಿವೃಷ್ಟಿ-ಅನಾವೃಷ್ಟಿಯ ಸಂದರ್ಭಗಳಲ್ಲಿ ಸರ್ಕಾರದ ವತಿಯಿಂದಲೇ ಇಲ್ಲಿ ಪೂಜೆ ನೆರವೇರಿಸಲಾಗಿತ್ತು.
ಓದಿ : ಆಲಮಟ್ಟಿಯ 18 ಗೇಟ್‌ಗಳ ಮೂಲಕ ನೀರು ಬಿಡುಗಡೆ; ಹೆಚ್ಚಿದ ಪ್ರವಾಹ ಭೀತಿ