ಚಿಕ್ಕಮಗಳೂರು: ನಗರದ ಉಪ್ಪಳ್ಳಿಯ ಹಿರೇಕೊಳಲೆ ರಸ್ತೆಯ ಮನೆಯೊಂದರ ಬಾಗಿಲು ಮುರಿದು ಒಳ ನುಗ್ಗಿದ ಕಳ್ಳರು 20 ಲಕ್ಷ ರೂ. ಮೌಲ್ಯದ 677 ಗ್ರಾಂ ಚಿನ್ನಾಭರಣಗಳನ್ನು ದೋಚಿರುವ ಪ್ರಕರಣ ಬೆಳಕಿಗೆ ಬಂದಿದೆ.
ಮನೆ ಮಾಲೀಕ ಹೆಚ್.ಎ.ಮಹಮ್ಮದ್ ಜಿಲ್ಲಾ ಸಹಕಾರ ಬ್ಯಾಂಕ್‍ನ ಉದ್ಯೋಗಿಯಾಗಿದ್ದು, ಕಟುಂಬಸ್ಥರೊಂದಿಗೆ ಬೇರೆಡೆಗೆ ತೆರಳಿದ್ದರು. ಇದನ್ನು ಗಮನಿಸಿದ ಖದೀಮರ ತಂಡ ಕಬ್ಬಿಣದ ಸಲಾಕೆಯಿಂದ ಮೀಟಿ ಬಾಗಿಲು ಮುರಿದು ಒಳನುಗ್ಗಿ, ಮಲಗುವ ಕೋಣೆಯ ವಾರ್ಡ್ ರೋಬ್ನಲ್ಲಿಟ್ಟಿದ್ದ ಚಿನ್ನಾಭರಣಗಳನ್ನು ಎಗರಿಸಿದ್ದಾರೆ.
ಕಳ್ಳತನ ನಡೆದಿರುವ ಬಗ್ಗೆ ತಿಳಿಯುತ್ತಿದ್ದಂತೆ ಮನೆಯ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣ ಬೆರಳಚ್ಚು ತಜ್ಞರೊಡನೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.