ಚಿಕ್ಕಮಗಳೂರು: ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕರಾವಳಿ ಭಾಗದ ಸಮುದ್ರ ತೀರದಲ್ಲಿ ಕಡಲ ಕೊರೆತ ಉಂಟಾಗುತ್ತಿದ್ದು, ಅದನ್ನು ತಡೆಗಟ್ಟಲು ತಡೆಗೋಡೆ ನಿರ್ಮಾಣ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಡಲ ಕೊರೆತ ಸಹಜವಾಗಿ ಪ್ರತಿ ಮಳೆಗಾಲದಲ್ಲಿ ಬರುತ್ತಿದೆ. ಅದನ್ನು ತಡೆಗಟ್ಟಲು ತಡೆ ಗೋಡೆ ನಿರ್ಮಾಣ ಮಾಡುವ ಪ್ರಯತ್ನ ನಡೆಯುತ್ತಿದೆ. ರಾಜ್ಯ ಸರ್ಕಾರ ಹಾಗೂ ಪಿಡಬ್ಲ್ಯೂಡಿ ಇಲಾಖೆಗೂ ಈಗಾಗಲೇ ಮನವಿ ಮಾಡಲಾಗಿದೆ. ತಡೆಗೋಡೆ ನಿರ್ಮಾಣ ಮಾಡಲು ವಿಶೇಷ ಪ್ರಯತ್ನ ಮಾಡಲಾಗುತ್ತಿದೆ. ಕಡಲ ಕೊರೆತ ಹಾಗೂ ಮೀನುಗಾರರಿಗೆ ಸರ್ಕಾರ ರಕ್ಷಣೆ ನೀಡಬೇಕು ಎಂದರು.
ಇನ್ನು, ಕಡಲ ಕೊರೆತದಿಂದ ರಸ್ತೆಗಳಿಗೆ, ಕುಡಿಯುವ ನೀರಿಗೆ ಹಾನಿ ಆಗದಂತೆ ಎಚ್ಚರ ವಹಿಸುವ ಜವಾಬ್ದಾರಿ ನಮ್ಮ ಮೇಲೆ ಇದೆ. ಇದರ ಬಗ್ಗೆ ಹೆಚ್ಚಿನ ಗಮನ ಹರಿಸುತ್ತೇವೆ ಎಂದರು.