ಚಿಕ್ಕಮಗಳೂರು: ಹಾಡ ಹಗಲೇ ಚಿನ್ನದಂಗಡಿಗೆ ನುಗ್ಗಿದ ಖದೀಮರು ಪಿಸ್ತೂಲಿನಿಂದ 3 ಸುತ್ತು ಗುಂಡು ಹಾರಿಸಿ ಚಿನ್ನಾಭರಣ ದರೋಡೆ ಮಾಡಲು ಯತ್ನಿಸಿರುವ ಘಟನೆ ನಗರದಲ್ಲಿ ನಡೆದಿದೆ.
ಇಂದು ಬೆಳಗ್ಗೆ ಬೈಕ್ನಲ್ಲಿ ಬಂದ ಮೂವರು ಖದೀಮರು, ನಗರದ ಎಂ.ಜಿ ರಸ್ತೆಯಲ್ಲಿರುವ ಕೇಸರಿ ಚಿನ್ನದ ಅಂಗಡಿಗೆ ನುಗ್ಗಿದ್ದರು. ಅಂಗಡಿಯೊಳಗೆ ಮೂರು ಸುತ್ತು ಗುಂಡು ಹಾರಿಸಿ ಅಲ್ಲಿದ್ದ ವಸ್ತುಗಳನ್ನು ಪುಡಿ ಪುಡಿ ಮಾಡಿ ಚಿನ್ನಾಭರಣ ಕಳ್ಳತನ ಮಾಡಲು ಯತ್ನಿಸಿ ಪರಾರಿಯಾಗಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಅಂಗಡಿ ಮಾಲೀಕನಿಗೆ ಯಾವುದೇ ತೊಂದರೆಯಾಗಿಲ್ಲ.
ವಿಷಯ ತಿಳಿದು ಸ್ಥಳಕ್ಕೆ ಜಿಲ್ಲಾ ಎಸ್ಪಿ ಅಕ್ಷಯ್ ಮಚ್ಚಿಂದ್ರ ಹಾಗೂ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ತಪಾಸಣೆ ನಡೆಸಿದರು.