ಚಿಕ್ಕಮಗಳೂರು: ಜಿಲ್ಲೆಯಲ್ಲಿ ಗೋವುಗಳ ಕಳ್ಳತನದ ಪ್ರಕರಣಗಳು ಹೆಚ್ಚಾಗುತ್ತಿದ್ದು, ರಸ್ತೆಯಲ್ಲಿ ಮಲಗಿದ್ದ ಹಸುಗಳನ್ನು ಖದೀಮರು ವಾಹನದಲ್ಲಿ ತುಂಬಿಕೊಂಡು ಹೋಗಿರುವ ಘಟನೆ ಮೂಡಿಗೆರೆ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ.
ಮೂಡಿಗೆರೆಯ ಛತ್ರ ಮೈದಾನದಲ್ಲಿ ಬುಧವಾರ ತಡರಾತ್ರಿ ಕಾರಿನಲ್ಲಿ ಬಂದಿದ್ದ ಖದೀಮರು ರಸ್ತೆಯಲ್ಲಿ ಮಲಗಿದ್ದ ಹಸುಗಳನ್ನು ಕದ್ದೊಯ್ದಿದ್ದಾರೆ. ಖದೀಮರ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಘಟನೆ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನೆ ಸಂಬಂಧ ಮೂಡಿಗೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಅಕ್ರಮ ಕಸಾಯಿಖಾನೆ ಮೇಲೆ ಖಾಕಿ ದಾಳಿ :

ಟಿಪ್ಪು ನಗರದಲ್ಲಿ ಅಕ್ರಮವಾಗಿ ನಡೆಸುತ್ತಿದ್ದ ಕಸಾಯಿಖಾನೆ ಮೇಲೆ ಪೊಲೀಸರು ದಾಳಿ ನಡೆಸಿ 4 ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ. ಆರು ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಚಿಕ್ಕಮಗಳೂರು ನಗರ ಇನ್ಸ್ಪೆಕ್ಟರ್ ಶಂಭುಲಿಂಗಯ್ಯ ನೇತೃತ್ವದ ತಂಡ ದಾಳಿ ನಡೆಸಿದೆ.
ಇದನ್ನೂ ಓದಿ: ಕೋವಿಡ್ ಮೂರನೇ ಅಲೆ ತಡೆಗೆ ಆಸ್ಪತ್ರೆಗಳಲ್ಲಿ ಸೂಕ್ತ ವ್ಯವಸ್ಥೆ: ಸಚಿವ ಡಾ. ಕೆ.ಸುಧಾಕರ್