ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮೂರನೇ ಬಲಿಯಾಗಿದ್ದು, ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವ್ಯಕ್ತಿ ಸಾವನ್ನಪ್ಪಿದ್ದಾನೆ.
ಚಿಕ್ಕಮಗಳೂರು ನಗರದ ಮಾರ್ಕೆಟ್ ನಿವಾಸಿ ಆಗಿರುವ ಈ ವ್ಯಕ್ತಿ ಜಿಲ್ಲಾ ಕೋವಿಡ್-19 ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಈವರೆಗೂ ಕೊರೊನಾಗೆ ಮೂರನೇ ಬಲಿಯಾದಂತಾಗಿದೆ.
ಕೆಲ ದಿನಗಳ ಹಿಂದೆ ಅಜ್ಜಂಪುರದಲ್ಲಿ ಓರ್ವ ವಯೋವೃದ್ಧೆ ಕೊರೊನಾ ಸೋಂಕಿಗೆ ಬಲಿಯಾಗಿದ್ದಳು. ಎರಡು ದಿನಗಳ ಹಿಂದೆ ನಗರದ ಉಪ್ಪಳ್ಳಿಯಲ್ಲಿ ಓರ್ವ ಮಹಿಳೆ ತೀವ್ರ ಉಸಿರಾಟದ ತೊಂದರೆಯಿಂದ ಸಾವನ್ನಪ್ಪಿದ್ದರು.