ಚಿಕ್ಕಮಗಳೂರು: ನಾನು ಕೂಡ ಈ ಬಾರಿ ಸಚಿವ ಸ್ಥಾನದ ಆಕಾಂಕ್ಷಿ ಎಂದು ಜಿಲ್ಲೆಯ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ. ಕುಮಾರಸ್ವಾಮಿ ಹೇಳಿದ್ದಾರೆ.
ಈ ಹಿಂದೆ ಜಿಲ್ಲೆಗೆ ಒಂದು ಸಚಿವ ಸ್ಥಾನ ನೀಡಲಾಗಿತ್ತು. ಆದರೆ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಗೆ ಸಚಿವ ಸ್ಥಾನದ ಅವಶ್ಯಕತೆ ಇದೆ. ಇಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಸಚಿವ ಸ್ಥಾನ ನೀಡುವುದು ವರಿಷ್ಠರಿಗೆ ಬಿಟ್ಟ ವಿಚಾರ. ಕಳೆದ ಬಾರಿಯೂ ನನಗೆ ಸಚಿವ ಸ್ಥಾನ ಕೈತಪ್ಪಿತ್ತು ಎಂದರು.
ಓದಿ:ಸಿಎಂ ಆಗಲು ಕಾರಣರಾದವರನ್ನು ಬಿಎಸ್ವೈ ನೆನಪಿಸಿಕೊಳ್ಳಲಿ; ಹೆಚ್. ವಿಶ್ವನಾಥ್
ಜಿಲ್ಲೆಯಲ್ಲಿ ಸೋತವರಿಗೆ ಗೆದ್ದವರಿಗೆ ಒಂದು ಸ್ಥಾನಮಾನ ನೀಡಲಾಗಿದೆ. ಆದರೆ ನಮ್ಮ ಜನಾಂಗದ ದೃಷ್ಟಿಯಿಂದ ಮೂರು ಬಾರಿ ಶಾಸಕನಾದರೂ ಯಾವುದೇ ಪ್ರಾತಿನಿಧ್ಯ ನೀಡಿಲ್ಲ. ನಮ್ಮ ಜನಾಂಗದವರಿಗೆ ಉತ್ತರ ನೀಡಲು ಆಗುತ್ತಿಲ್ಲ. ಸಚಿವ ಸ್ಥಾನ ನೀಡಿದರೆ ಪಕ್ಷಕ್ಕೆ ನಾನು ಕೂಡ ಶಕ್ತಿಯಾಗಿ ಕೆಲಸ ಮಾಡುತ್ತೇನೆ. ಸಚಿವ ಸ್ಥಾನ ನನಗೆ ನೀಡಿ ಎಂದು ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.