ಚಿಕ್ಕಮಗಳೂರು: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಚುನಾವಣೆಗೆ ಸರ್ವ ಸನ್ನದ್ದವಾಗಿದೆ ಎಂದು ಬಿಜೆಪಿ ಮುಖಂಡರಾದ ಜಿಲ್ಲಾ ಬಿಜೆಪಿ ವಕ್ತಾರ ಲೋಕೇಶ್ ಹೇಳಿದರು.
ಇಂದು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ಬಿಜೆಪಿ ಪಕ್ಷ ಈ ಕ್ಷೇತ್ರದಲ್ಲಿ ಗೆಲುವಿನ ಪತಾಕೆಯನ್ನು ಹಾರಿಸಲಿದ್ದು, ಲೋಕಸಭಾ ಅಭ್ಯರ್ಥಿಯಾಗಿರುವ ಶೋಭಾ ಅವರು ಈ ಬಾರಿ ಭಾರಿ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಲೋಕೇಶ್ ಹೇಳಿದರು.
ಕಳೆದ 5 ವರ್ಷದ ಅವಧಿಯಲ್ಲಿ ಉಡುಪಿ-ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಂಸದೆ ಶೋಭಾ ಅವರು ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ಅಲ್ಲದೆ ದೇಶದ 125 ಕೋಟಿ ಜನರ ಮನ ಗೆದ್ದಿರುವ ಪ್ರಧಾನಿ ನರೇಂದ್ರ ಮೋದಿ ಅವರ ಸಾಧನೆಗೆ ಈ ಬಾರಿಯೂ ಜನ ಮನ್ನಣೆ ಸಿಗಲಿದೆ. ಮತ್ತೊಮ್ಮೆ ಮೋದಿ ಪ್ರಧಾನಿ ಅಗಲಿದ್ದಾರೆ ಎಂದರು.
ಶೋಭಾ ಅವರ ಅವಧಿಯಲ್ಲಿ ಉಡುಪಿ - ಚಿಕ್ಕಮಗಳೂರು ಕ್ಷೇತ್ರಕ್ಕೆ 3.777 ಕೋಟಿಗೂ ಹೆಚ್ಚು ಅನುದಾನ ಸಿಕ್ಕಿದೆ. ಕಡೂರು, ಚಿಕ್ಕಮಗಳೂರು, ಮೂಡಿಗೆರೆ, ಹೆದ್ದಾರಿ ರಸ್ತೆ ಅಗಲೀಕರಣ ಅಮೃತ್ ಯೋಜನೆ, ಕೇಂದ್ರೀಯ ವಿದ್ಯಾಲಯ ಮಂಜೂರಾತಿ, ಶಿವನಿ, ಅಜ್ಜಂಪುರ ಹೊಸ ರೈಲು ನಿಲುಗಡೆ ಮತ್ತು ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಿದ್ದಾರೆ. ಈ ಮೂಲಕ ಶೋಭಾ ಗೆಲುವಿನೊಂದಿಗೆ ಮೋದಿ ಮತ್ತೆ ಪ್ರಧಾನಿ ಆಗಲಿದ್ದಾರೆ ಎಂದರು.