ETV Bharat / state

ರಾಜ್ಯದ ಜನರ ದಾರಿ ತಪ್ಪಿಸಲು ಕಾಂಗ್ರೆಸ್​ನಿಂದ ಹುಲಿ ಉಗುರಿನ ನಾಟಕ: ಸಿ.ಟಿ.ರವಿ

ಹುಲಿ ಉಗುರು ಪೆಂಡೆಂಟ್ ವಿಚಾರದ ಮೂಲಕ ಕಾಂಗ್ರೆಸ್ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಮಾಜಿ ಸಚಿವ ಸಿ.ಟಿ.ರವಿ ಟೀಕಿಸಿದ್ದಾರೆ.

ಮಾಜಿ ಸಚಿವ ಸಿ.ಟಿ ರವಿ
ಮಾಜಿ ಸಚಿವ ಸಿ.ಟಿ ರವಿ
author img

By ETV Bharat Karnataka Team

Published : Oct 27, 2023, 5:47 PM IST

ಚಿಕ್ಕಮಗಳೂರು: ಇತ್ತೀಚಿಗೆ ನಡೆದ ಐಟಿ ದಾಳಿ, ಪತ್ತೆಯಾದ ನೂರು ಕೋಟಿಗೂ ಅಧಿಕ ಅಕ್ರಮ ಹಣದ ಕುರಿತಾದ ಚರ್ಚೆಯನ್ನು ದಾರಿ ತಪ್ಪಿಸಿ, ಸಾರ್ವಜನಿಕರ ಆಕ್ರೋಶಕ್ಕೆ ಪೂರ್ಣವಿರಾಮ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಕಮಿಷನ್ ಕಲೆಕ್ಟರ್ (CM) ಮತ್ತು ಡೆಪ್ಯೂಟಿ ಕಮಿಷನ್ ಕಲೆಕ್ಟರ್ (DCM) ಆರಂಭಿಸಿರುವ ಹೊಸ ನಾಟಕ 'ಹುಲಿ ಉಗುರು' ಎಂದು ಬಿಜೆಪಿಯ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.

  • " class="align-text-top noRightClick twitterSection" data="">

ನೂರಾರು ವರ್ಷಗಳಿಂದ ಹುಲಿಯುಗುರನ್ನು ಬಹಳ ಜನ ಆಭರಣವಾಗಿ ಧರಿಸುತ್ತಿದ್ದುದು ಹೊಸದಲ್ಲ. ಅರಣ್ಯ ಇಲಾಖೆಯ ಅಧಿಕಾರಿಗಳು ಕಾಣದೇ ಇದ್ದದ್ದೂ ಅಲ್ಲ. ಈಗ ಸರ್ಕಾರದ ಆಡಳಿತಾತ್ಮಕ ವೈಫಲ್ಯ, ಬೋಗಸ್ ಭರವಸೆಗಳ ಮೇಲಿನ ಜನರ ಆಕ್ರೋಶ, ರೈತರಿಗೆ ವಿದ್ಯುತ್ ಪೂರೈಸಲಾಗದೆ ನೀಡಿದ ಕತ್ತಲೆ ಭಾಗ್ಯ, ಬರ ಪರಿಸ್ಥಿತಿ ನಿರ್ವಹಣೆಯಲ್ಲಿನ ವೈಫಲ್ಯ, ಸರಕಾರದ ಮಂತ್ರಿಗಳು ತೆರೆದ ನಕಲಿ ದಾಖಲೆಗಳ ಇಲಾಖೆ, ಶಾಸಕರು ಬಂಡಾಯದ ಬಸ್ ಹತ್ತುತ್ತಿರುವ ಬೇಗುದಿ ಮತ್ತು ಇವೆಲ್ಲಕ್ಕಿಂತ ಮುಖ್ಯವಾಗಿ ಪಂಚ ರಾಜ್ಯ ಚುನಾವಣೆಗೆ ನಡೆಸಿದ ಕಲೆಕ್ಷನ್ ಐಟಿ ಇಲಾಖೆಯ ಪಾಲಾಗಿ ಜನರೆದುರು ತಲೆಯೆತ್ತಿ ನಡೆಯಲಾಗದು ಎನ್ನುವ ಕಾರಣಕ್ಕೆ 'ಹುಲಿಯುಗುರು' ಎಂಬ ಸದಾರಮೆ ನಾಟಕ ಆಡುತ್ತಿರುವುದು ಸ್ಪಷ್ಟ ಎಂದು ಸಾಮಾಜಿಕ ಜಾಲತಾಣದಲ್ಲಿ ಕಿಡಿಕಾರಿದ್ದಾರೆ.

ಜನಸಾಮಾನ್ಯರಿಗೆ ನೇರ ಎಫ್ಎಸ್ಎಲ್ ವರದಿ ಬರುವುದಕ್ಕೆ ಮುಂಚೆಯೇ ಬಂಧನ, ಸೆಲೆಬ್ರಿಟಿಗಳಿಗೆ ನೋಟಿಸ್ ಇದೆಲ್ಲವೂ ಈ ನಾಟಕದ ಭಾಗವಲ್ಲವೇ? ಇದು ನಿಮ್ಮ ಸರಕಾರದ ಪ್ರಾಮಾಣಿಕತೆಯ ಬಗ್ಗೆ ಸಂಶಯ ಮೂಡಿಸುವುದಿಲ್ಲವೇ? ಎಂದು ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು: ಹುಲಿ ಉಗುರಿನ ಮಾದರಿ ಪೆಂಡೆಂಟ್ ವಶಕ್ಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.