ಚಿಕ್ಕಮಗಳೂರು: ಜಿಲ್ಲೆಯಲ್ಲಿ ಹಲವು ದಿನಗಳ ನಂತರ ಮತ್ತೆ ಹುಲಿಯ ಹೆಜ್ಜೆ ಗುರುತು ಪತ್ತೆಯಾಗಿದ್ದು, ಸ್ಥಳೀಯರು ಭಯಭೀತರಾಗಿದ್ದಾರೆ.
ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಭಾರತಿ ಬೈಲ್ನಲ್ಲಿರುವ ಪಂಡಿತರ ತೋಟದಲ್ಲಿ ಹುಲಿ ಪ್ರತ್ಯಕ್ಷವಾಗಿದ್ದು, ತೋಟದಲ್ಲಿ ಕೆಲಸ ಮಾಡುವ ಕಾರ್ಮಿಕರು ಬೆಚ್ಚಿ ಬಿದ್ದಿದ್ದಾರೆ. ಕೂಡಲೇ ಕಾಮೀಕರು ಜೀವಭಯದಿಂದ ಸ್ಥಳದಿಂದ ಓಡಿ ಹೋಗಿದ್ದು ತೋಟದ ಪಕ್ಕದಲ್ಲಿಯೇ ಈ ಹುಲಿ ಸಂಚಾರ ಮಾಡುತ್ತಿರುವ ಸಂಶಯ ವ್ಯಕ್ತವಾಗಿದೆ.
ಹುಲಿಯ ಹೆಜ್ಜೆ ಗುರುತು ಕಾಫಿ ತೋಟದಲ್ಲಿ ಪತ್ತೆಯಾಗಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರೆ ಇಲ್ಲಿ ಕೆಲಸ ಮಾಡುವ ಕಾರ್ಮಿಕರ ಭಯ ಮಾತ್ರ ಇನ್ನು ಕಡಿಮೆಯಾಗಿಲ್ಲ.