ಚಿಕ್ಕಮಗಳೂರು: ಮಹಿಳೆ ಮೇಲೆ ಟಿಪ್ಪರ್ ಲಾರಿ ಹರಿದು ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ನಗರದ ಶೃಂಗಾರ್ ಸರ್ಕಲ್ನಲ್ಲಿ ನಡೆದಿದೆ.
ಲಕ್ಷ್ಮಿ (48) ಮೃತ ಮಹಿಳೆ. ಇವರು ರಾಮನ ಹಳ್ಳಿ ನಿವಾಸಿಯಾಗಿದ್ದಾರೆ. ದಂಪತಿಗಳು ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಟಿಪ್ಪರ್ ಲಾರಿ ಬೈಕ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ನಿಂದ ಕೆಳಗೆ ಬಿದ್ದ ಮಹಿಳೆ ಮೇಲೆ ಟಿಪ್ಪರ್ ಲಾರಿ ಹರಿದು ಸ್ಥಳದಲ್ಲಿಯೇ ಮಹಿಳೆ ಸಾವನ್ನಪ್ಪಿದ್ದಾರೆ. ಲಕ್ಷ್ಮಿ ಅವರ ಪತಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಟಿಪ್ಪರ್ ಲಾರಿ ಚಾಲಕನನ್ನು ಸ್ಥಳೀಯರು ಹಿಡಿದು ಹಿಗ್ಗಾಮುಗ್ಗಾ ಥಳಿಸಿ ಪೋಲಿಸರಿಗೆ ಒಪ್ಪಿಸಿದ್ದಾರೆ. ನಗರದ ಟ್ರಾಫಿಕ್ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.