ಶಿವಮೊಗ್ಗ/ಚಿತ್ರದುರ್ಗ/ಚಿಕ್ಕಮಗಳೂರು: ಜಿಲ್ಲೆಗಳ ಇಂದಿನ ಕೊರೊನಾ ವರದಿ ಅಂಕಿ - ಅಂಶಗಳು ಈ ಕೆಳಗಿನಂತಿದೆ.
ಶಿವಮೊಗ್ಗ ಜಿಲ್ಲೆ ಕೊರೊನಾ ವರದಿ:
ಜಿಲ್ಲೆಯಲ್ಲಿ ಇಂದು 120 ಜನರಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಇದರಿಂದ ಸೋಂಕಿತರ ಸಂಖ್ಯೆ 17,667 ಕ್ಕೆ ಏರಿಕೆಯಾಗಿದೆ. ಇಂದು 168 ಜನ ಗುಣಮುಖರಾಗಿದ್ದು, ಇದರಿಂದ ಜಿಲ್ಲೆಯಲ್ಲಿ ಇದುವರೆಗೂ 15,905 ಜನ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇಂದು ಕೊರೊನಾದಿಂದ 2 ಸಾವು ಸಂಭವಿಸಿದೆ. ಇದುವರೆಗೂ ಜಿಲ್ಲೆಯಲ್ಲಿ ಕೊರೊನಾಕ್ಕೆ ಬಲಿಯಾದವರ ಸಂಖ್ಯೆ 323ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 1,455 ಜನ ಚಿಕಿತ್ಸೆಯಲ್ಲಿದ್ದಾರೆ.
ಮೆಗ್ಗಾನ್ ಕೋವಿಡ್ ಆಸ್ಪತ್ರೆಯಲ್ಲಿ 152 ಜನ ಸೋಂಕಿತರಿದ್ದಾರೆ. ಕೋವಿಡ್ ಕೇರ್ ಸೆಂಟರ್ ನಲ್ಲಿ 53 ಜನ ಇದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 103 ಜನ ಇದ್ದಾರೆ. ಮನೆಯಲ್ಲಿ 1,132 ಜನ ಐಸೋಲೇಷನ್ ನಲ್ಲಿದ್ದಾರೆ. ಆಯುರ್ವೇದ ಕಾಲೇಜಿನಲ್ಲಿ 15 ಸೋಂಕಿತರಿದ್ದಾರೆ.
ತಾಲೂಕುವಾರು ಸೋಂಕಿತರ ಸಂಖ್ಯೆ:
ಶಿವಮೊಗ್ಗ-66
ಭದ್ರಾವತಿ-14
ಶಿಕಾರಿಪುರ-16
ತೀರ್ಥಹಳ್ಳಿ-09
ಸೊರಬ-05
ಸಾಗರ-10
ಹೊಸನಗರ-00
ಚಿತ್ರದುರ್ಗ ಜಿಲ್ಲೆ ಕೊರೊನಾ ವರದಿ:
ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಇಂದು 242 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 10,537 ಕ್ಕೆ ಏರಿಕೆಯಾದಂತಾಗಿದೆ. ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿಂದು 448 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 590 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.
ವರದಿಯಲ್ಲಿ 242 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 10,537 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 45 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 8704 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 1788 ಸಕ್ರಿಯ ಪ್ರಕರಣಗಳು ಇವೆ.
ಚಿಕ್ಕಮಗಳೂರು ಜಿಲ್ಲೆ ಕೊರೊನಾ ವರದಿ:
ಜಿಲ್ಲೆಯಲ್ಲಿ ಈ ದಿನ 231 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ, 10,975 ಕ್ಕೆ ಏರಿಕೆಯಾಗಿದೆ. ಈ ದಿನ ಜಿಲ್ಲಾ ಕೋವಿಡ್ -19 ಆಸ್ಪತ್ರೆಯಿಂದ 197 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೂ ಜಿಲ್ಲೆಯಲ್ಲಿ ಒಟ್ಟು 9,228 ಜನ ಸೋಂಕಿತರು, ಜಿಲ್ಲಾ ಕೋವೀಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದು ಗುಣ ಮುಖರಾಗಿ ಬಿಡುಗಡೆಯಾಗಿದೆ.
ಚಿಕ್ಕಮಗಳೂರು- 64, ಕಡೂರು- 42, ಮೂಡಿಗೆರೆ -31, ತರೀಕೆರೆ- 19, ಶೃಂಗೇರಿ- 03, ಕೊಪ್ಪ-30, ಎನ್ಆರ್ ಪುರ-42, ಸೋಂಕಿತ ಪ್ರಕರಣಗಳು ಪತ್ತೆಯಾಗಿದೆ. ಈವರೆಗೂ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 133 ಕ್ಕೆ ಏರಿಕೆಯಾಗಿದೆ. ಈ ದಿನ ಪತ್ತೆಯಾದ ಸೋಂಕಿತರು ವಾಸ ಮಾಡುತ್ತಿದ್ದ, ಮನೆಯನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಂಪೂರ್ಣ ಸೀಲ್ ಡೌನ್ ಮಾಡಿ ಕಟ್ಟೆಚ್ಚರ ವಹಿಸಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 10,975 ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು 1,417 ಸಕ್ರಿಯ ಪ್ರಕರಣಗಳಿವೆ.